ETV Bharat / bharat

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ: ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು - Madhyapradesh

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ ಜಿಲ್ಲೆಯಲ್ಲಿ ನಡೆದಿದೆ.

ನಾಲ್ವರು ಆತ್ಮಹತ್ಯೆಗೆ ಯತ್ನ
ನಾಲ್ವರು ಆತ್ಮಹತ್ಯೆಗೆ ಯತ್ನ
author img

By

Published : Aug 28, 2021, 4:13 PM IST

ಮಧ್ಯಪ್ರದೇಶ (ಭೋಪಾಲ್​): ಸಾಲಭಾದೆ ತಾಳದೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಭೋಪಾಲ್​​ನ ಮಿಶ್ರೋಡ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಲಾಕ್​ಡೌನ್​​​ ಆದ ಹಿನ್ನೆಲೆ ಸಿವಿಲ್ ಎಂಜಿನಿಯರ್ ಆಗಿದ್ದವರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೆ, ದಂಪತಿ ವಿಷ ಸೇವನೆ, ಮಕ್ಕಳಿಬ್ಬರ ಕುತ್ತಿಗೆಯನ್ನು ಬ್ಲೇಡ್​ನಿಂದ ಕುಯ್ದಿದ್ದಾರೆ. ಘಟನೆಯಲ್ಲಿ ತಂದೆ, ಮಗಳು ಮೃತಪಟ್ಟಿದ್ದು, ತಾಯಿ-ಮಗನ ಸ್ಥಿತಿ ಗಂಭೀರವಾಗಿದೆ. ಇವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್​ ಬ್ಯಾನರ್ಜಿ ದಂಪತಿಗೆ ಇಡಿ ಸಮನ್ಸ್​

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.