ETV Bharat / bharat

DCM DK Shivakumar: ಮಧ್ಯಪ್ರದೇಶದ ಪೀತಾಂಬರ ಪೀಠಕ್ಕೆ ಡಿಕೆಶಿ ಭೇಟಿ.. ಭಾನುವಾರ ಮಹಾಕಾಳೇರ ದೇವಸ್ಥಾನದಲ್ಲಿ ಭಸ್ಮ ಆರತಿಯಲ್ಲಿ ಭಾಗಿ - ಮಧ್ಯಪ್ರದೇಶದ ದಾತಿಯಾ ಜಿಲ್ಲೆ

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿರುವ ಪ್ರಸಿದ್ಧ ಪೀತಾಂಬರ ಪೀಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಾಳೆ ಮುಂಜಾನೆ 4 ಗಂಟೆ ಸುಮಾರಿಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಸ್ಮ ಆರತಿಯಲ್ಲಿ ಭಾಗಿಯಾಗಲಿದ್ದಾರೆ.

Etv Bharat
Etv Bharat
author img

By

Published : Jun 10, 2023, 10:46 PM IST

ಇಂದೋರ್ (ಮಧ್ಯ ಪ್ರದೇಶ): ಕರ್ನಾಟಕ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎರಡು ದಿನಗಳ ಕಾಲ ಮಧ್ಯಪ್ರದೇಶದ ಪ್ರವಾಸ ಕೈಗೊಂಡಿದ್ದು, ಇಂದು ಇಂದೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ನಂತರ ಅಲ್ಲಿಂದ ದಾತಿಯಾ ಜಿಲ್ಲೆಯ ಪ್ರಸಿದ್ಧ ಪೀತಾಂಬರ ಪೀಠಕ್ಕೆ ಭೇಟಿ ನೀಡಿ ಡಿಕೆಶಿ ಪ್ರಾರ್ಥನೆ ಸಲ್ಲಿಸಿದರು.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಡಿಕೆ ಶಿವಕುಮಾರ್ ಗ್ವಾಲಿಯರ್‌ಗೆ ತೆರಳಿದರು. ನಾಳೆ (ಭಾನುವಾರ) ಶಿವಕುಮಾರ್ ಉಜ್ಜಯಿನಿಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಸ್ಮ ಆರತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಕಾಲಭೈರವ ದೇವಸ್ಥಾನದಲ್ಲೂ ಪೂಜೆ ಸಲ್ಲಿಸಲಿದ್ದಾರೆ.

ಇದಕ್ಕೂ ಮುನ್ನ ಇಂದೋರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿವಾದಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡುವ ಬದಲು ಕರ್ನಾಟಕದ ಅಭಿವೃದ್ಧಿಗೆ ಸಾಧ್ಯವಿರುವ ಎಲ್ಲವನ್ನೂ ನಾವು ಮಾಡುತ್ತೇವೆ ಎಂದು ಹೇಳಿದರು. ಬಜರಂಗ ದಳ ನಿಷೇಧಿಸುವ ಮತ್ತು ಹೆಡ್ಗೇವಾರ್ ಪಠ್ಯ ತೆಗೆದುಹಾಕುವ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಕರ್ನಾಟಕ ಶಾಂತಿಯ ತೋಟವಾಗಿದೆ. ಇಲ್ಲಿ ಶಾಂತಿ ಕದಡಲು ಪ್ರಯತ್ನಿಸುವ ಯಾವುದೇ ಸಂಘಟನೆಯನ್ನು ಬಿಡುವುದಿಲ್ಲ ಎಂದರು.

  • #WATCH | Let us only discuss issues of development and not emotions (Tipu Sultan issue). We have said that if any organisation will try to disturb the peace of Karnataka, we will look into them. no moral policing will be allowed: Karnataka Deputy CM DK Shivakumar pic.twitter.com/pkT1Uchq4N

    — ANI (@ANI) June 10, 2023 " class="align-text-top noRightClick twitterSection" data=" ">

ಬಜರಂಗ ದಳ ನಿಷೇಧದ ಪ್ರಶ್ನೆಗೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ನಮ್ಮ ಮೊದಲ ಆದ್ಯತೆ ಅಭಿವೃದ್ಧಿಯಾಗಿದೆ. ಯಾವುದೇ ಭಾವನಾತ್ಮಕ ವಿಷಯಕ್ಕೆ ಯಾವುದೇ ಮೌಲ್ಯವಿಲ್ಲ. ಭಾರತವು ವೈವಿಧ್ಯತೆಯ ದೇಶವಾಗಿದೆ. ಆದ್ದರಿಂದ ನಾವು ಯಾವುದೇ ಭಾವನಾತ್ಮಕ ವಿಷಯಗಳನ್ನು ಚರ್ಚಿಸಲು ಬಯಸುವುದಿಲ್ಲ ಎಂದು ತಿಳಿಸಿದರು. ಇದೇ ವೇಳೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರ್‌ಎಸ್‌ಎಸ್ ಮತ್ತು ಇತರ ಸಂಘಟನೆಗಳಿಗೆ ಮಂಜೂರಾದ ಭೂಮಿ ವಿಷಯ ಕುರಿತು ಕಾಂಗ್ರೆಸ್ ಸರ್ಕಾರವು ಪರಿಶೀಲಿಸಿದ ಪ್ರಶ್ನೆಗೆ ಡಿಕೆಶಿ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಸರ್ಕಾರದ ಸಂಬಂಧಪಟ್ಟ ಸಚಿವರು ಉತ್ತರಿಸುತ್ತಾರೆ ಎಂದಷ್ಟೇ ಹೇಳಿದರು.

ಮತ್ತೊಂದೆಡೆ, ಮಧ್ಯಪ್ರದೇಶದಲ್ಲೂ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಇದುವರೆಗೆ ಜನತೆ ಡಬಲ್ ಇಂಜಿನ್ ಸರ್ಕಾರವನ್ನು ನೋಡಿದ್ದಾರೆ. ಆದ್ದರಿಂದ ಈ ಬಾರಿ ಮಧ್ಯಪ್ರದೇಶದಲ್ಲಿ ಬದಲಾವಣೆಯಾಗಲಿದೆ ಮತ್ತು ಜನರು ಅಭಿವೃದ್ಧಿಗೆ ಆದ್ಯತೆ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಇದನ್ನೂ ಓದಿ: DKS: ಕೊರೋನಾ ನಿಯಮ ಉಲ್ಲಂಘನೆ... ಡಿಸಿಎಂ ಡಿಕೆಶಿ ವಿರುದ್ಧ ದಾಖಲಾದ ಪ್ರಕರಣ ರದ್ದು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.