ETV Bharat / bharat

Priyanka Gandhi: ಬಿಜೆಪಿಯ ಡಬಲ್ ಇಂಜಿನ್​ ಸರ್ಕಾರಕ್ಕೆ ಹಿಮಾಚಲ, ಕರ್ನಾಟಕದ ಜನತೆ ತಕ್ಕ ಉತ್ತರ ನೀಡಿದ್ದಾರೆ: ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ​ ರಣಕಹಳೆ - ಪ್ರಿಯಾಂಕಾ ಗಾಂಧಿ

ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದರೆ ಹಲವು ಭರವಸೆಗಳನ್ನು ಈಡೇರಿಸುವ ಬಗ್ಗೆ ಪ್ರಕಟಿಸಿದ್ದಾರೆ.

ಬಿಜೆಪಿಯ ಡಬಲ್ ಇಂಜಿನ್​ ಸರ್ಕಾರಕ್ಕೆ ಹಿಮಾಚಲ, ಕರ್ನಾಟಕದ ಜನತೆ ತಕ್ಕ ಉತ್ತರ ನೀಡಿದ್ದಾರೆ: ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ​ ರಣಕಹಳೆ
MP polls: Priyanka Gandhi launches campaign, corners BJP on scams
author img

By

Published : Jun 12, 2023, 4:44 PM IST

Updated : Jun 12, 2023, 5:01 PM IST

ಜಬಲ್ಪುರ್ (ಮಧ್ಯಪ್ರದೇಶ): ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿನ ವಿವಿಧ ಹಗರಣಗಳಿಂದ ಹಿಡಿದು ನಿರುದ್ಯೋಗ, ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದವರೆಗಿನ ವಿಷಯಗಳ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿಯ ಡಬಲ್ ಇಂಜಿನ್​ ಸರ್ಕಾರಕ್ಕೆ ಹಿಮಾಚಲ ಪ್ರದೇಶ, ಕರ್ನಾಟಕದ ಜನತೆ ತಕ್ಕ ಉತ್ತರವನ್ನು ನೀಡಿದ್ದಾರೆ ಎನ್ನುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಗೆಲುವಿಗೆ ರಣಕಹಳೆ ಮೊಳಗಿಸಿದ್ದಾರೆ.

ಸೋಮವಾರ ನರ್ಮದಾ ನದಿಗೆ ಪೂಜೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ನಂತರ ಜಬಲ್ಪುರ್ ಜಿಲ್ಲೆಯಲ್ಲಿ ಸಭೆಯನ್ನು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಪ್ರಚಾರಕ್ಕೆ ಚಾಲನೆ ಕೊಟ್ಟರು. ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಹಗರಣಗಳ ಪಟ್ಟಿಯು ಪ್ರಧಾನಿ ನರೇಂದ್ರ ಮೋದಿಯವರ ನಿಂದನೆಗಿಂತ ಉದ್ದವಾಗಿದೆ ಎಂದು ತಿಳಿದು ನನಗೆ ಆಶ್ಚರ್ಯವಾಗಿದೆ. ಕಳೆದ 220 ದಿನಗಳಲ್ಲಿ ಮಧ್ಯಪ್ರದೇಶದಲ್ಲಿ 250 ಹಗರಣಗಳು ನಡೆದಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿದ ನಂತರ ಬಿಜೆಪಿ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ತಂದ ಅಭಿವೃದ್ಧಿ ಇದು ಎಂದು ಟೀಕಾ ಪ್ರಹಾರ ನಡೆಸಿದರು.

ಭ್ರಷ್ಟಾಚಾರವು ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಭ್ರಷ್ಟಾಚಾರ ಜನತೆ ಭವಿಷ್ಯವನ್ನೇ ಹಾಳುಮಾಡುತ್ತದೆ. ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಭರವಸೆಗಳನ್ನು ನೀಡುತ್ತವೆ. ಗೆದ್ದ ನಂತರ ತಮ್ಮ ಆಶ್ವಾಸನೆಗಳನ್ನೇ ಮರೆತುಬಿಡುತ್ತವೆ. ಮಧ್ಯಪ್ರದೇಶದಲ್ಲೂ ಇದೇ ನಡೆಯುತ್ತಿದೆ. ಒಂದೆರಡು ದಿನಗಳ ಹಿಂದೆ ಜಬಲ್ಪುರದಲ್ಲಿ ಬಿಜೆಪಿ ಯೋಜನೆಯೊಂದನ್ನು ಘೋಷಿಸಿದೆ. ನಾನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೇಳಲು ಬಯಸುತ್ತೇನೆ.. ಕಳೆದ 18 ವರ್ಷಗಳಲ್ಲಿ ನೀವು ಏನು ಮಾಡಿದ್ದೀರಿ ಎಂದು ಪ್ರಿಯಾಂಕಾ ಪ್ರಶ್ನಿಸಿದರು.

ಮಹಾಕಲ್ ಲೋಕ ಕಾರಿಡಾರ್‌ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪವನ್ನು ಗುರಿಯಾಗಿಸಿಕೊಂಡು ಕೇಸರಿ ಪಕ್ಷವು ದೇವರನ್ನೂ ಬಿಟ್ಟಿಲ್ಲ ಎಂದು ಟೀಕಿಸಿದ ಕಾಂಗ್ರೆಸ್​ ನಾಯಕಿ, ಕಳೆದ 18 ವರ್ಷಗಳಿಂದ ಮಧ್ಯಪ್ರದೇಶದ ಜನರನ್ನು ಬಿಜೆಪಿ ಕೇವಲ ಅಧಿಕಾರಕ್ಕೆ ಬರಲು ಬಳಸಿಕೊಳ್ಳುತ್ತಿದೆ. ಬಿಜೆಪಿ ಚುನಾವಣಾ ಸಮಯದಲ್ಲಿ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ, ಅವುಗಳನ್ನು ಎಂದಿಗೂ ಈಡೇರಿಸುವುದಿಲ್ಲ. ನಾನು ಹಲವು ಡಬಲ್, ಟ್ರಿಪಲ್ ಇಂಜಿನ್ ಸರ್ಕಾರಗಳನ್ನು ನೋಡಿದ್ದೇನೆ. ಆದರೆ, ಹಿಮಾಚಲ ಪ್ರದೇಶ, ಕರ್ನಾಟಕದ ಜನರು ಆ ಸರ್ಕಾರಗಳಿಗೆ ತಕ್ಕ ಉತ್ತರವನ್ನು ನೀಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್​ ಚುನಾವಣಾ ಭರವಸೆಗಳು: ಪ್ರಿಯಾಂಕಾ ಗಾಂಧಿ ತಮ್ಮ ಭಾಷಣದಲ್ಲಿ 2023ರ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದರೆ ಹಲವು ಭರವಸೆಗಳನ್ನು ಈಡೇರಿಸುವ ಬಗ್ಗೆ ಪ್ರಕಟಿಸಿದರು. ಮಧ್ಯಪ್ರದೇಶದ ಎಲ್ಲ ಮಹಿಳೆಯರಿಗೆ ನಾರಿ ಸಮ್ಮಾನ್ ಯೋಜನೆ ಅಡಿಯಲ್ಲಿ ತಿಂಗಳಿಗೆ 1,500 ರೂ., ಸಾವಿರ ರೂಪಾಯಿಗೆ ಸಿಗುತ್ತಿರುವ ಗ್ಯಾಸ್ ಸಿಲಿಂಡರ್​ಅನ್ನು 500 ರೂಪಾಯಿಗೆ ಇಳಿಸಲಾಗುವುದು. ಅಲ್ಲದೇ, ಮೊದಲ 100 ಯೂನಿಟ್‌ಗಳಿಗೆ ವಿದ್ಯುತ್ ಬಿಲ್ ಮನ್ನಾ ಮತ್ತು ನಂತರದ 200 ಯೂನಿಟ್‌ಗಳಿಗೆ ಅರ್ಧ ಶುಲ್ಕ ಮಾತ್ರ ವಿಧಿಸಲಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡಲಾಗುವುದು. ರೈತರ ಸಾಲ ಮನ್ನಾ ಮಾಡಲಾಗುವುದು ಮತ್ತು ಬೆಂಬಲ ಬೆಲೆಯಲ್ಲಿ ರಸಗೊಬ್ಬರ ಸಮಸ್ಯೆ ನಿವಾರಣೆ ಮಾಡಲಾಗುತ್ತದೆ. ಬೆಳೆಗಳಿಗೆ ಸಮರ್ಪಕ ಬೆಲೆ ದೊರೆಯುವಂತೆ ಮಾಡಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ: MP Assembly Election 2023: ನರ್ಮದಾ ನದಿಗೆ ಪೂಜೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

Last Updated : Jun 12, 2023, 5:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.