ಭೋಪಾಲ್ (ಮಧ್ಯಪ್ರದೇಶ): ನಡುರಸ್ತೆಯಲ್ಲಿ ಅರೆಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನ ತನ್ನ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮಾನವೀಯತೆ ಮೆರೆದಿದ್ದಾರೆ.
ಅವರು ಭೈರಗಢ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ, ಅದೇ ಮಾರ್ಗದಲ್ಲಿ ಮಹಿಳೆಯೊಬ್ಬರು ಅಸ್ವಸ್ಥ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದರು. ಇದನ್ನು ಗಮನಿಸಿದ ಸಂಸದೆ ತಕ್ಷಣ ಕಾರನ್ನು ನಿಲ್ಲಿಸಿ ಕೆಳಗಿಳಿದು ಬಂದು ಆಕೆಯ ಸಮಸ್ಯೆ ವಿಚಾರಿಸಲು ಮುಂದಾಗಿದ್ದಾರೆ.
ಆಕೆಯ ಜೊತೆಗಿದ್ದ ಇನ್ನೋರ್ವ ಮಹಿಳೆ ಆ್ಯಂಬುಲೆನ್ಸ್ಗೆ ಕರೆ ಮಾಡಿರುವುದಾಗಿ ತಿಳಿಸಿದ್ದಾಳೆ. ಆದರೆ ಸಂಸದೆ ಆಕೆಯನ್ನ ತನ್ನ ಕಾರಿನಲ್ಲಿಯೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸೂಕ್ತ ಸಮಯಕ್ಕೆ ರೋಗಿಯನ್ನು ಆಸ್ಪತ್ರೆಗೆ ಸಾಗಿಸಿದ ಸಂಸದೆ ಪ್ರಜ್ಞಾ ಸಿಂಗ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.