ಛಿಂದ್ವಾರಾ, ಮಧ್ಯಪ್ರದೇಶ: ಐಶರ್ ಟ್ರಕ್ ಸ್ವಿಫ್ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಕಾರಿನಲ್ಲಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದ ಬೆತುಲ್ ರಿಂಗ್ ರೋಡ್ನಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಸ್ಪಿ ಸುದೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿದ್ದವರು ನಾಗಪುರದಿಂದ ಉಮ್ರೆತ್ಗೆ ಬರುತ್ತಿದ್ದರು. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ನಂತರ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಬಾರಾಬಂಕಿಯಲ್ಲಿ ದೂರು