ನವದೆಹಲಿ: ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಕ್ವಾರಿ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಆಗ್ರಹಿಸಿದರು.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿಯೇ ಸುಮಾರು 15 ಗ್ರಾಮಗಳಲ್ಲಿ 2500 ಎಕರೆಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿಗಳಿಗೆ ಸುಮಲತಾ ಅಂಬರೀಷ್ ಮನವಿ ಮಾಡಿದರು.
ಇದನ್ನೂ ಓದಿ: ರಿಷಿಗಂಗಾದಲ್ಲಿ ಮತ್ತೊಂದು ಸರೋವರ: ಮತ್ತೊಂದು ಅಪಾಯದ ತಡೆಯಲು ಸಿದ್ಧತೆಗಳೇನು..?
ಅಭಿವೃದ್ಧಿ ಚಟುವಟಿಕೆಗೆ ಅವಕಾಶ ನೀಡುವ ವೇಳೆ, ಅಕ್ರಮ ಗಣಿಗಾರಿಕೆ ಅಥವಾ ಅಕ್ರಮ ಕ್ವಾರಿಗಳನ್ನು ಪರಿಶೀಲನೆ ನಡೆಸಬೇಕಾಗಿರುವುದು ಅನಿವಾರ್ಯ ಎಂದು ಈ ವೇಳೆ ಅಭಿಪ್ರಾಯಪಟ್ಟವರು.
ಈ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್, ಅಕ್ರಮ ಗಣಿಗಾರಿಕೆ ಬಗೆಗಿನ ಪ್ರತಿಯೊಂದು ದೂರನ್ನೂ ಕೂಡಾ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಇದರೊಂದಿಗೆ ಅಕ್ರಮ ಗಣಿಗಾರಿಕೆಯಿಂದ ಪರಿಸರ ನಾಶವಾದರೆ ಹೆಚ್ಚಿನ ದಂಡವನ್ನೂ ವಿಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.