ಭೋಪಾಲ್ : ಮಧ್ಯಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೋವಿಡ್ ಕೇಸ್‌ಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬುಧವಾರದಿಂದ ಏಪ್ರಿಲ್ 15ರವರೆಗೂ ಛತ್ತೀಸ್ಗಢಕ್ಕೆ ಬಸ್ ಸಂಚಾರ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.
ಯಾರೆಲ್ಲ ಮಾಸ್ಕ್ ಧರಿಸುವುದಿಲ್ಲವೋ ಅವರ ಮೇಲೆ ಕ್ರಿಮಿನಲ್ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಚೌಹಾಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಓದಿ : ಒಬ್ಬರೇ ಪ್ರಯಾಣಸುತ್ತಿದ್ದರೂ ಮಾಸ್ಕ್ ಧರಿಸುವುದು ಕಡ್ಡಾಯ: ಹೈಕೋರ್ಟ್
ರಾಜ್ಯದಲ್ಲಿ ಇಂದು ಸುಮಾರು 3,722 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 3,13,971 ಮಂದಿ ಕೊರೊನಾ ಪೀಡಿತರಿದ್ದಾರೆ.