ಭೋಪಾಲ್(ಮಧ್ಯಪ್ರದೇಶ) : ಮಹಿಳೆಯರ ಮೇಲಾಗುವ ದೌರ್ಜನ್ಯ, ಅಪರಾಧಗಳನ್ನು ನಿಯಂತ್ರಿಸಲು ಹಾಗೂ ಅವರಿಗೆ ಶೀಘ್ರ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಠಾಣೆ ಸ್ಥಾಪಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ರಾಜ್ಯದ 10 ಜಿಲ್ಲೆಗಳಲ್ಲಿ ಈಗಾಗಲೇ ಇಂತಹ ಪೊಲೀಸ್ ಠಾಣೆಗಳಿವೆ. ಈಗ ಉಳಿದ 42 ಜಿಲ್ಲೆಗಳಲ್ಲಿ ಪೊಲೀಸ್ ಠಾಣೆ ನಿರ್ಮಿಸಲು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಎಲ್ಲಾ 52 ಜಿಲ್ಲೆಗಳಲ್ಲೂ ಮಹಿಳಾ ಪೊಲೀಸ್ ಠಾಣೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಪೊಲೀಸ್ ಠಾಣೆಗಳಿಗೆ 1,470 ಸಿಬ್ಬಂದಿಯನ್ನು ನೇಮಿಸಲಾಗಿದೆ. ಸರ್ಕಾರದ ಈ ನಿರ್ಧಾರವು ಮಹಿಳೆಯರ ಮೇಲಿನ ಅಪರಾಧಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ನರೋತ್ತಮ್ ಮಿಶ್ರಾ ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ:Covid 3ನೇ ಅಲೆ ನಿಭಾಯಿಸಲು 100 ಕೋಟಿ ರೂ. ರಿಲೀಸ್ ಮಾಡಿದ ಸ್ಟಾಲಿನ್