ಇಂದೋರ್(ಮಧ್ಯಪ್ರದೇಶ): ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಖಜರಾನ ಗಣೇಶ ದೇಗುಲದ ಹುಂಡಿ ಹಣ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. 32 ಹುಂಡಿಗಳಿಂದ 1 ಕೋಟಿ 80 ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂದು ಖಜರಾನ ಗಣೇಶ ದೇವಸ್ಥಾನದ ಆಡಳಿತಾಧಿಕಾರಿ ಪ್ರಕಾಶ್ ದುಬೆ ಮಾಹಿತಿ ನೀಡಿದ್ದಾರೆ.
ವಿಶೇಷವೆಂದರೆ, ಈ ಬಾರಿ ಹೆಚ್ಚಿನ ಸಂಖ್ಯೆಯ ಜನರು ಹಳೆಯ 500, 1000 ರೂ ನೋಟುಗಳನ್ನು ಅರ್ಪಿಸಿದ್ದಾರೆ ಎಂಬುದು ಗಮನಾರ್ಹ. ಸಂಗ್ರಹವಾಗಿರುವ ಹಣವನ್ನು ಬ್ಯಾಂಕ್ಗೆ ಜಮಾ ಮಾಡಲಾಗುವುದು ಎಂದು ದುಬೆ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ಹಾಗೂ ದೇವಸ್ಥಾನದ 25 ಕ್ಕೂ ಹೆಚ್ಚು ಸಿಬ್ಬಂದಿ ಹಣ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು. ಈ ಬಾರಿ ದೇವಸ್ಥಾನದ ಕಾಣಿಕೆ ಪೆಟ್ಟಿಗೆಗಳಲ್ಲಿ ಹಣದ ಜತೆಗೆ ಬೆಳ್ಳಿ, ಚಿನ್ನದ ನಾಣ್ಯಗಳು, ವಿದೇಶಿ ಕರೆನ್ಸಿ ಇದ್ದವು ಎಂದು ಪ್ರಕಾಶ್ ದುಬೆ ಹೇಳಿದ್ದಾರೆ.
ಇದನ್ನೂ ಓದಿ : ಅಯೋಧ್ಯೆಗೆ ಭೇಟಿ ನೀಡಿದ ಅರವಿಂದ್ ಕೇಜ್ರಿವಾಲ್: ರಾಮ್ಲಲ್ಲಾದಲ್ಲಿ ಪೂಜೆ, ಪ್ರಾರ್ಥನೆ