ನವದೆಹಲಿ: ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ. ಈಗಾಗಲೇ ಮಹಿಳೆ ಸೇರಿದಂತೆ 7 ಮಂದಿಯನ್ನು ರಕ್ಷಿಸಲಾಗಿದೆ. ಇಬ್ಬರು ಕಟ್ಟಡದಡಿ ಸಿಲುಕಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಅವಘಡದ ವೇಳೆ ಮನೆಯಲ್ಲಿ 9 ಮಂದಿಯಿದ್ದು, ಎಲ್ಲರೂ ಅವಶೇಷಗಳಡಿ ಸಿಲುಕಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ ಮಹಿಳೆ ಸೇರಿದಂತೆ 7 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಇಬ್ಬರ ರಕ್ಷಣಾ ಕಾರ್ಯ ನಡೆಯುತ್ತಿದೆ. ರಕ್ಷಿಸಲಾದ ಏಳು ಮಂದಿಯನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ದಳ ತಿಳಿಸಿದೆ.
ಇದನ್ನೂ ಓದಿ: ಲಕ್ನೋದಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 10 ಮಂದಿ ಸಾವು