ಮುಂಬೈ(ಮಹಾರಾಷ್ಟ್ರ): ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. 24 ಗಂಟೆಯೊಳಗೆ ಬಿಟ್‌ಕಾಯಿನ್‌ನಲ್ಲಿ ಒಂದು ಮಿಲಿಯನ್ ಡಾಲರ್ ನೀಡಬೇಕೆಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಿಮಾನ ನಿಲ್ದಾಣದ ಅಧಿಕೃತ ಇ-ಮೇಲ್ ಖಾತೆಗೆ ಬೆದರಿಕೆ ಕಳುಹಿಸಲಾಗಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ಇ-ಮೇಲ್ ಬಂದಿದ್ದು, ನಿಲ್ದಾಣದ ಅಧಿಕಾರಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇಮೇಲ್ ಅನ್ನು quaidacasrol@gmail.com ಎಂಬ ಐಡಿಯಿಂದ ಕಳುಹಿಸಲಾಗಿದೆ. ಸ್ಫೋಟ ತಡೆಯಬೇಕಾದರೆ ಕೂಡಲೇ ಹಣ ಕಳುಹಿಸಿ, 24 ಗಂಟೆಗಳಲ್ಲಿ ಮತ್ತೊಂದು ಇಮೇಲ್ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ.
ಸಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385 ಮತ್ತು 505 (1) (ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಪರಿಚಿತ ಆರೋಪಿಯ ಐಪಿ ವಿಳಾಸ ಪತ್ತೆ ಹಚ್ಚಲಾಗಿದೆ. ಶೀಘ್ರವೇ ಆರೋಪಿಯನ್ನು ಪತ್ತೆ ಹಚ್ಚಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಸ್ಪೋಟಿಸುವ ಬೆದರಿಕೆ: ಖಲಿಸ್ತಾನ್ ಉಗ್ರರಿಗೆ ಭಾರತ ಖಡಕ್ ಎಚ್ಚರಿಕೆ