ಮುಂಬೈ (ಮಹಾರಾಷ್ಟ್ರ): ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಥಾಣೆಯ ಮುಂಬ್ರಾದಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಮುಂಬೈನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಶುಕ್ರವಾರ ಮುಂಬೈನ ಜೋಗೇಶ್ವರಿ ಪ್ರದೇಶದಲ್ಲಿ ಬಂಧನಕ್ಕೊಳಗಾಗಿದ್ದ ಜಾಕೀರ್ ಹುಸೇನ್ ಶೇಖ್ (45) ಎಂಬ ಶಂಕಿತ ಉಗ್ರನು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ನಿನ್ನೆ ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ ಎಟಿಎಸ್ ದಾಳಿ ನಡೆಸಿತ್ತು. ನಿನ್ನೆ ರಾತ್ರಿ ಮುಂಬ್ರಾದಲ್ಲಿ ಮತ್ತೊಬ್ಬನನ್ನು ಸೆರೆಹಿಡಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರಲ್ಲೂ ಉಗ್ರರ ದಾಳಿ ಸಂಚು.. ನಗರದಾದ್ಯಂತ ಪೊಲೀಸರಿಂದ ಹೈಅಲರ್ಟ್
ಕಳೆದ ಮಂಗಳವಾರ ದೆಹಲಿ ಪೊಲೀಸರು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಿದ್ದರು. ಬಂಧಿತರಲ್ಲಿ ಓರ್ವ ವಿಚಾರಣೆ ವೇಳೆ ಕರ್ನಾಟಕದ ಮೈಸೂರು, ಬೆಂಗಳೂರು ಸೇರಿ ದೇಶದ ವಿವಿಧ ಭಾಗಗಳಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವುದಾಗಿ ಬಾಯ್ಬಿಟ್ಟಿದ್ದ.
ಇದೀಗ ಮೊನ್ನೆ ಮತ್ತು ನಿನ್ನೆ ಮುಂಬೈ ಎಟಿಎಸ್ ಬಂಧಿಸಿರುವ ಇವರಿಬ್ಬರೂ ಕೂಡ ಇದೇ ಘಟಕಕ್ಕೆ ಸೇರಿದ್ದಾರೆಂದು ಹೇಳಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಮುಂಬೈನಲ್ಲಿ ಓರ್ವ ಶಂಕಿತ ಭಯೋತ್ಪಾದಕನ ಬಂಧಿಸಿದ ಎಟಿಎಸ್