ಮುಂಬೈ(ಮಹಾರಾಷ್ಟ್ರ): ಒಬಿಸಿಯ ರಾಜಕೀಯ ಮೀಸಲಾತಿ ವಿಚಾರವಾಗಿ ಮೈತ್ರಿ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷವು ಇಂದು ರಾಜ್ಯಾದ್ಯಂತ ಆಂದೋಲನ ನಡೆಸಲಿದೆ.
ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜಯ್ ಕುಟೆ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಯೋಗೀಶ್ ತಿಲೇಕರ್ ಅವರು ಈ ಆಂದೋಲನದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಯೋಗೇಶ್ ತಿಲೇಕರ್ ಮಾತನಾಡಿ, ಕಳೆದ ಆರು ತಿಂಗಳಿನಿಂದ ಮೈತ್ರಿ ಸರ್ಕಾರವು ಒಬಿಸಿ ಸಮುದಾಯದ ರಾಜಕೀಯ ಮೀಸಲಾತಿಯನ್ನು ತಪ್ಪಿಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಮನೆಯಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ.. ತನಿಖೆಗೆ ಆದೇಶ
ಭಾರತೀಯ ಜನತಾ ಪಕ್ಷವು ಒಬಿಸಿ ಸಮುದಾಯದ ಡೇಟಾವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸುತ್ತಿದೆ. ಆದರೆ ಮೈತ್ರಿ ಸರ್ಕಾರ ಕಳೆದ ಆರು ತಿಂಗಳಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಿರ್ಲಕ್ಷ್ಯದ ಪರಿಣಾಮವಾಗಿ, 5 ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಬಿಸಿ ಮೀಸಲಾತಿಯಿಲ್ಲದೇ ಘೋಷಿಸಲಾಗಿದೆ ಎಂದು ತಿಳಿಸಿದರು.