ETV Bharat / bharat

Pornography case: ಮಾಡೆಲ್ ಗೆಹನಾ ಸೇರಿ ಮೂವರಿಗೆ ಮುಂಬೈ ಕ್ರೈಂ ಬ್ರಾಂಚ್ ನೋಟಿಸ್!

ಅಶ್ಲೀಲ ಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್​ಕುಂದ್ರಾ ಬಂಧನದ ಬೆನ್ನಲ್ಲೇ, ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಸಂಬಂಧ ಇಂದು ಮೂವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಮಾಡೆಲ್ ಗೆಹನಾ
ಮಾಡೆಲ್ ಗೆಹನಾ
author img

By

Published : Jul 25, 2021, 10:33 AM IST

Updated : Jul 25, 2021, 11:07 AM IST

ಮುಂಬೈ (ಮಹಾರಾಷ್ಟ್ರ): ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್​​ ಕಿರುತೆರೆ ನಟಿ ಹಾಗೂ ಮಾಡೆಲ್​ ಗೆಹನಾ ವಸಿಷ್ಠ​ ಸೇರಿ ಮೂವರಿಗೆ ನೋಟಿಸ್ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಬಗ್ಗೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2021ರ ಫೆಬ್ರವರಿಯಲ್ಲಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಜಾಲತಾಣಗಳಿಗೆ ಅಪ್ಲೋಡ್ ಮಾಡುತ್ತಿದ್ದ ಸಂಬಂಧ ಬಂಧನಕ್ಕೊಳಗಾಗಿದ್ದ ಗೆಹನಾ ವಸಿಷ್ಠ ಅಲಿಯಾಸ್​​ ವಂದನಾ ತಿವಾರಿ ಈ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಅಂಧೇರಿಯಲ್ಲಿರುವ ಕುಂದ್ರಾ ಕಚೇರಿಯಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಗುಪ್ತ ಬೀರೊಂದನ್ನು ಪತ್ತೆ ಮಾಡಿದ್ದಾರೆ. ಈ ಬೀರುವಿನಲ್ಲಿ ಏನಿದೆ ಅನ್ನೋದರ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ ರಾಜ್​ಕುಂದ್ರಾ, ಶೀಘ್ರದಲ್ಲೇ ಅಕ್ರಮ ಹಣ ವರ್ಗಾವಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಪ್ರಕರಣಗಳನ್ನು ಎದುರಿಸಲಿದ್ದಾರೆ. ಹಣಕಾಸಿನ ವ್ಯವಹಾರ ಸಂಬಂಧ ಇಡಿ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಕಚೇರಿಯಲ್ಲಿ ರಹಸ್ಯ ಬೀರು ಪತ್ತೆ!

ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಅವುಗಳನ್ನು ಕೆಲ ಆ್ಯಪ್​ಗಳಲ್ಲಿ ಪ್ರಕಟಿಸುತ್ತಿದ್ದ ಆರೋಪ ರಾಜ್ ಕುಂದ್ರಾ ಮೇಲಿದೆ. ಈ ಪ್ರಕರಣ ಸಂಬಂಧ ಅವರನ್ನು ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

Last Updated : Jul 25, 2021, 11:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.