ETV Bharat / bharat

ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಕೇಸ್: ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಸಾಧ್ಯತೆ

ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ ಮತ್ತು ಮುಂಬೈ ಪೊಲೀಸರು ಈಗಾಗಲೇ ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳವೂ ಈ ಪ್ರಕರಣಕ್ಕೆ ಎಂಟ್ರಿ ಪಡೆಯುವ ಸಾಧ್ಯತೆ ದಟ್ಟವಾಗಿದೆ.

Mumbai cruise drugs case likely to go to NIA
ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಕೇಸ್: ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಸಾಧ್ಯತೆ
author img

By

Published : Oct 30, 2021, 9:07 AM IST

ಮುಂಬೈ(ಮಹಾರಾಷ್ಟ್ರ): ಕ್ರೂಸ್ ​ಶಿಪ್​ನಲ್ಲಿ ಡ್ರಗ್ಸ್ ಪಾರ್ಟಿ ಕೇಸ್​​ಗೆ ಸಂಬಂಧಿಸಿದಂತೆ ಈಗಾಗಲೇ ಎನ್​ಸಿಬಿ ಮತ್ತು ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸುತ್ತಿದ್ದು, ಈಗ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಕೂಡಾ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಈಗಾಗಲೇ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳೊಂದಿಗೆ ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ಸುಮಾರು ಮೂರು ಗಂಟೆಗಳ ಕಾಲ ಚರ್ಚಿಸಿ, ಕೆಲವೊಂದು ಉಪಯುಕ್ತ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅಂತಾರಾಷ್ಟ್ರೀಯ ಮಾದಕ ವ್ಯಸನ ದಂಧೆಯೊಂದಿಗೆ ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಕೇಸ್ ಲಿಂಕ್ ಹೊಂದಿದೆ ಎಂಬ ಅನುಮಾನಗಳ ಆಧಾರದ ಮೇಲೆ ರಾಷ್ಟ್ರೀಯ ತನಿಖಾದಳ ವಿಚಾರಣೆ ನಡೆಸಲಿದೆ. ಇದರ ಜೊತೆಗೆ ಹೈಪ್ರೊಫೈಲ್ ವ್ಯಕ್ತಿಗಳೊಂದಿಗೆ ಈ ಪ್ರಕರಣ ಸಂಬಂಧ ಹೊಂದಿರುವ ಕಾರಣದಿಂದ ಎನ್​ಐಎಗೆ ತನಿಖೆಗೆ ವಹಿಸಲಾಗಿದೆ.

ಇದರ ಜೊತೆಗೆ ಡ್ರಗ್ಸ್ ಪ್ರಕರಣ ತನಿಖೆಯಲ್ಲಿ ಹಲವಾರು ಲೋಪದೋಷಗಳ ಆರೋಪ ಕೇಳಿ ಬರುತ್ತಿದೆ. ಪ್ರಕರಣದ ತನಿಖೆಯನ್ನು ನೇತೃತ್ವ ವಹಿಸಿಕೊಂಡಿರುವ ಮುಂಬೈ ವಲಯ ಎನ್​ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧವೂ ಕೆಲವೊಂದು ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ನ್ಯಾಯಮೂರ್ತಿಗಳಿಗೆ ಪ್ರಶಸ್ತಿ ನೀಡುವಂತೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.