ETV Bharat / bharat

ಮುಂಬೈನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ.. ವಾಚ್​ಮ್ಯಾನ್​​ನಿಂದ ನಡೀತು ದುಷ್ಕೃತ್ಯ.. - 11 ವರ್ಷದ ಬಾಲಕಿ ಮೇಲೆ ರೇಪ್​

ಕಳೆದ ಕೆಲ ದಿನಗಳ ಹಿಂದೆ ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿದ್ದ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಚಿಕ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ..

Girl rape
Girl rape
author img

By

Published : Sep 18, 2021, 5:33 PM IST

ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಬಾಲಕಿಯರ ಮೇಲಿನ ಅತ್ಯಾಚಾರದಂತಹ ಹೇಯ ಕೃತ್ಯಗಳು ನಿಲ್ಲುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲ. ಹೈದರಾಬಾದ್​, ನವದೆಹಲಿ ಬಳಿಕ ಇದೀಗ ವಾಣಿಜ್ಯ ನಗರಿ ಮುಂಬೈನಲ್ಲಿ ಅಂತಹದೊಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ ಸಹೋದರ ಸಂಬಂಧಿಯಾಗಿದ್ದ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೌಸಿಂಗ್​ ಸೊಸೈಟಿಯಲ್ಲಿ 42 ವರ್ಷದ ವ್ಯಕ್ತಿ ವಾಚ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದನು ಎಂದು ವರದಿಯಾಗಿದೆ.

ಕಂಜುಮಾರ್ಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಲಕಿ ಮೇಲೆ ಕಾಮುಕ ವ್ಯಕ್ತಿ ಎರಡು ಸಲ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಆರೋಪಿಯನ್ನ ಬಂಧನ ಮಾಡಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿರಿ: ಪಂಜಾಬ್​ ರಾಜಕೀಯ ಬಿಕ್ಕಟ್ಟು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕ್ಯಾಪ್ಟನ್​ ಅಮರಿಂದರ್ ಸಿಂಗ್​

ಕಳೆದ ಕೆಲ ದಿನಗಳ ಹಿಂದೆ ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿದ್ದ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಚಿಕ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.