ಮುಂಬೈ (ಮಹಾರಾಷ್ಟ್ರ): ಅಶ್ಲೀಲ ಚಿತ್ರ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಅಪರಾಧ ಶಾಖೆ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ನೆರೂಲ್ ಪ್ರದೇಶದ ರಿಯಾನ್ ಥಾರ್ಪ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.
ನಿನ್ನೆಯಷ್ಟೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾಗಿ ಮುಂಬೈ ಪೊಲೀಸರು ತಿಳಿಸಿದ್ದರು. ಬಂಧನದ ಬಳಿಕ ರಾಜ್ ಕುಂದ್ರಾ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮುಂಬೈ ಪೊಲೀಸ್ ಆಯುಕ್ತರ ಕಚೇರಿಗೆ ಕರೆತರಲಾಗಿದೆ.
ಫೆಬ್ರವರಿ ತಿಂಗಳಲ್ಲಿ ರಾಜ್ ಕುಂದ್ರಾ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬಳಿಕ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದ ರಾಜ್ ಕುಂದ್ರಾ, ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದರು.
ಇದನ್ನೂ ಓದಿ:ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ನಟಿ Shilpa Shetty ಪತಿ ರಾಜ್ ಕುಂದ್ರಾ ಅರೆಸ್ಟ್