ಮುಂಬೈ: ನಿನ್ನೆ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ರೋಗಿಗಳು ಮೃತಪಟ್ಟಿದ್ದ ಘಟನೆ ಸಂಬಂಧ ಇದೀಗ ಆಸ್ಪತ್ರೆ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಮುಂಬೈನ ಭಾಂಡುಪ್ ಪ್ರದೇಶದಲ್ಲಿನ ಡ್ರೀಮ್ಸ್ ಶಾಪಿಂಗ್ ಮಾಲ್ನಲ್ಲಿರುವ ಸನ್‌ರೈಸ್ ಖಾಸಗಿ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗಿತ್ತು. ನಿನ್ನೆ ಇಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 9 ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದರು. 70ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಣೆ ಮಾಡಲಾಗಿತ್ತು.
ಇದನ್ನೂ ಓದಿ: ಪಶ್ಚಿಮ ಬಂಗಾಳ; ಚುನಾವಣಾ ಕಾರ್ಯ ನಿರತ ಬಸ್ಗೆ ಬೆಂಕಿ.. ವಿಡಿಯೋ
ಘಟನೆ ಸಂಬಂಧ ಸನ್‌ರೈಸ್ ಆಸ್ಪತ್ರೆಯ ನಿರ್ದೇಶಕ ಅಮಿತ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳ ವಿರುದ್ಧ ಭಾಂಡುಪ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.