ಮುಂಬೈ: ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ನಂತರ ಜಾಮೀನು ಪಡೆದು ಹೊರ ಬಂದಿದ್ದರು. ಈ ಪ್ರಕರಣದ ಸಂಬಂಧ ಮುಂಬೈ ಸೈಬರ್ ಕ್ರೈಮ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ರಾಜ್ ಕುಂದ್ರಾ ಅವರ ಮಾಡಿರುವ ಕೃತ್ಯಗಳ ಬಗ್ಗೆ ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಚಾರ್ಜ್ ಶೀಟ್ನಲ್ಲಿ ಉದ್ಯಮಿ ಮತ್ತು ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಮುಂಬೈನ ಎರಡು ಡೀಲಕ್ಸ್ ಹೋಟೆಲ್‌ಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದರು. ನಟಿಯರಾದ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ, ಚಲನಚಿತ್ರ ನಿರ್ಮಾಪಕಿ ಮೀತಾ ಜುಂಜುನ್ವಾಲಾ ಮತ್ತು ಕ್ಯಾಮರಾಮನ್ ರಾಜು ದುಬೆ ಇದರಲ್ಲಿ ಭಾಗಿಯಾಗಿದ್ದಾರೆ. ಹಣದ ಲೋಭಕ್ಕಾಗಿ ಓಟಿಟಿ ವೇದಿಕೆಯಲ್ಲಿ ಅಶ್ಲೀಲ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದ್ದರು ಎಂದು 450 ಪುಟಗಳ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಕಾನೂನು ಪ್ರಕ್ರಿಯೆ ಅನುಸರಿಸಿ ನ್ಯಾಯಾಲಯಕ್ಕೆ ಹಾಜರಾಗಿ ಚಾರ್ಜ್ ಶೀಟ್ ಪ್ರತಿಯನ್ನು ಸಂಗ್ರಹಿಸುತ್ತೇವೆ ಎಂದು ಕುಂದ್ರಾ ಪರ ವಕೀಲ ಪ್ರಶಾಂತ್ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಮುಂಬೈ ಕ್ರೈಂ ಬ್ರ್ಯಾಂಚ್ ವಿರುದ್ಧ ಸಿಬಿಐಗೆ ದೂರು ಕೊಟ್ಟ ರಾಜ್ ಕುಂದ್ರಾ