ETV Bharat / bharat

ನೂಪುರ್‌ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್; ವಿಚಾರಣೆಗೆ ಹಾಜರಾಗಲು ಸೂಚನೆ - ನೂಪುರ್​ ಶರ್ಮಾಗೆ ಸಮನ್ಸ್​ ಜಾರಿ

ಆಕ್ಷೇಪಾರ್ಹ ಧಾರ್ಮಿಕ ಹೇಳಿಕೆ ನೀಡಿದ ನೂಪುರ್​ ಶರ್ಮಾ ಅವರಿಗೆ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಸಮನ್ಸ್​ ನೀಡಿದ್ದಾರೆ.

ನೂಪುರ್​ ಶರ್ಮಾ
ನೂಪುರ್​ ಶರ್ಮಾ
author img

By

Published : Jun 12, 2022, 10:01 AM IST

ಮುಂಬೈ: ಪ್ರವಾದಿ ಮೊಹಮ್ಮದ್ ಪೈಗಂಬರ್​ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ನೂಪುರ್​ ಶರ್ಮಾ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್​ 25 ರಂದು ವಿಚಾರಣೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮನ್ಸ್​ ಜಾರಿ ಮಾಡಿದ್ದಾರೆ.

ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಮುಂಬೈನ ಪೈಧುನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ಜೂನ್ 25ರಂದು ಬೆಳಗ್ಗೆ 11 ಗಂಟೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ವಿವಾದಿತ ಹೇಳಿಕೆಯಿಂದ ರೊಚ್ಚಿಗೆದ್ದಿರುವ ಮುಸ್ಲಿಮರು, ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ, ದೇಶದ ಹಲವೆೆಡೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಹಿಂಸಾತ್ಮಕ ಸ್ವರೂಪವನ್ನೂ ಪಡೆದುಕೊಂಡಿದೆ. ಕೆಲವು ರಾಜ್ಯಗಳಲ್ಲಿ ಉದ್ರಿಕ್ತರು ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ: ನೂಪುರ್ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಹಿಂಸಾಚಾರ ಹೆಚ್ಚಳ ಸಾಧ್ಯತೆ: ಹೈ ಅಲರ್ಟ್ ಆದ ರಾಜ್ಯ ಪೊಲೀಸರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.