ಮುಂಬೈ (ಮಹಾರಾಷ್ಟ್ರ): ಅಂಧೇರಿ ರೈಲ್ವೆ ನಿಲ್ದಾಣದಲ್ಲಿ ಹಳಿಗಳ ಮೇಲೆ ಅಪಾಯಕಾರಿ ಸ್ಟಂಟ್ ಮಾಡಿದ್ದಕ್ಕಾಗಿ ರೈಲ್ವೆ ಪೊಲೀಸ್ ಪಡೆ ಅರ್ಮಾನ್ ಶೇಖ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಇತ್ತೀಚೆಗೆ ರೈಲ್ವೆ ಹಳಿ ಮೇಲೆ ಕುಳಿತು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಂತೆ ನಟಿಸಿದ್ದ ಅರ್ಮಾನ್ ಶೇಖ್ ವಿಡಿಯೋ ವೈರಲ್ ಆಗಿತ್ತು.
ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗ್ತಿದ್ದಂತೆ, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ತೀವ್ರ ಶೋಧದ ನಂತರ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ, ವಿಡಿಯೋ ಚಿತ್ರೀಕರಿಸಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಕ್ಕಾಗಿ ಅರ್ಮಾನ್ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಅರ್ಮಾನ್ ಜತೆ ಸಂಪರ್ಕ ಹೊಂದಿದ್ದವರಿಗೂ ಖಾಕಿ ಪಡೆ ಶೋಧ ನಡೆಸುತ್ತಿದೆ.
ಇದನ್ನೂ ಓದಿ:ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ