ಮುಂಬೈ(ಮಹಾರಾಷ್ಟ್ರ): ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಸೆಷನ್ಸ್ ಕೋರ್ಟ್ ಸೋಮವಾರ ನಡೆಸಿತು. ಸೋಮವಾರ ಸಂಜೆ 5 ಗಂಟೆಗೆ ಆದೇಶವನ್ನು ಪ್ರಕಟಿಸಲು ನ್ಯಾಯಾಲಯ ನಿರ್ಧರಿಸಿತ್ತು. ಆದರೆ, ಆದೇಶ ಸಿದ್ಧವಾಗದ ಕಾರಣ ಮೇ 4ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ಕೋರ್ಟ್ ಆದೇಶವನ್ನು ಪ್ರಕಟಿಸಲಿದೆ.
ಮೇ 3 ಮಂಗಳವಾರ ರಜಾ ದಿನವಾಗಿರುವ ಕಾರಣ ಮೇ 4ಕ್ಕೆ ಮುಂಬೈ ಕೋರ್ಟ್ ಆದೇಶವನ್ನು ಪ್ರಕಟಿಸಲಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲೀಸ್ ಪಠಿಸುವ ಸವಾಲು ಹಾಕಿದ್ದ ಶಾಸಕ ರವಿ ರಾಣಾ ಹಾಗೂ ಅವರ ಪತ್ನಿ ಅಮರಾವತಿ ಸಂಸದೆ ನವನೀತ್ ಕೌರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ ನಂತರ ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ: ನವಜಾತ ಶಿಶುವಿಗೆ ಕಚ್ಚಿದ 'ಇಲಿ'.. ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಆಕ್ರೋಶ