ETV Bharat / bharat

ವಿಡಿಯೋ: ಕಟ್ಟಡದ ಭಾಗ ಕುಸಿದು ವೃದ್ಧೆ ಸಾವು; ಓರ್ವ ಕೂದಲೆಳೆ ಅಂತರದಲ್ಲಿ ಬಚಾವ್ - ಮುಂಬೈನ ಕಲ್ಬಾದೇವಿ ಪ್ರದೇಶ

ಮುಂಬೈನ ಕಲ್ಬಾದೇವಿ ಪ್ರದೇಶದಲ್ಲಿ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ಪರಿಣಾಮ 61 ವರ್ಷದ ವೃದ್ಧೆ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಕೂದಲೆಳೆ ಅಂತರದಲ್ಲಿ ಪಾರಾದರು.

Mumbai building collapse
Mumbai building collapse
author img

By

Published : Oct 4, 2021, 12:18 PM IST

ಮುಂಬೈ (ಮಹಾರಾಷ್ಟ್ರ): ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ದಿಢೀರ್ ಕುಸಿದು ಬಿದ್ದ ಪರಿಣಾಮ 61 ವರ್ಷದ ವೃದ್ಧೆ ಮೃತಪಟ್ಟಿರುವ ಘಟನೆ ಮುಂಬೈನ ಕಲ್ಬಾದೇವಿ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ವೃದ್ಧೆಯನ್ನು ಸುಂದರ ಸಾಹು ಎಂದು ಗುರುತಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಎಲ್ಲಾ ನಿವಾಸಿಗಳನ್ನು ಸ್ಥಳಾಂತರಗೊಳಿಸಿದ್ದಾರೆ.

ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

ಇದನ್ನೂ ಓದಿ: ಮುಂಬೈ: ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಎನ್​ಸಿಬಿ ವಶಕ್ಕೆ

ಕಟ್ಟಡ ಕುಸಿತದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋದಲ್ಲಿ ಕಟ್ಟಡದ ಕೆಳಗೆ ಕುಳಿತಿದ್ದ ವ್ಯಕ್ತಿಯೊಬ್ಬ ಸ್ವಲ್ಪದರಲ್ಲೇ ಪಾರಾಗಿರುವುದನ್ನು ಕಾಣಬಹುದು. ಕಲ್ಬಾದೇವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.