ETV Bharat / bharat

ಮಹಿಳೆ ಮೇಲೆ ಗ್ಯಾಂಗ್​ ರೇಪ್​: ಸಿಗರೇಟ್‌ನಿಂದ ಖಾಸಗಿ ಭಾಗ ಸುಟ್ಟು ಹಲ್ಲೆ: ಆರೋಪಿಗಳ ಬಂಧನಕ್ಕೆ ತಲಾಶ್​ - ಮುಂಬೈ ಮಹಾನಗರ

ಮುಂಬೈಯಲ್ಲಿ ಮಹಿಳೆ ಮೇಲೆ ಮೂವರು ಕಾಮುಕರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

A casual picture
ಸಾಂದರ್ಭಿಕ ಚಿತ್ರ
author img

By

Published : Dec 4, 2022, 5:43 PM IST

ಮುಂಬೈ(ಮಹಾರಾಷ್ಟ್ರ): ಮಹಿಳೆಯೊಬ್ಬರ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ಸಿಗರೇಟ್‌ನಿಂದ ಆಕೆಯ ಖಾಸಗಿ ಭಾಗಗಳಿಗೆ ಸುಟ್ಟು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕೇಸ್​ 2012 ರಲ್ಲಿ ದೆಹಲಿಯಲ್ಲಿ ನಡೆದಿದ್ದ `ನಿರ್ಭಯಾ' ಸಾಮೂಹಿಕ ಅತ್ಯಾಚಾರ ಪ್ರಕರಣ ನೆನಪಿಸುವಂತಿದೆ.

ಮುಂಬೈ ಮಹಾನಗರ ಕುರ್ಲಾದಲ್ಲಿ ಬುಧವಾರ ಬೆಳಗ್ಗೆ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಒಬ್ಬೊಬ್ಬರಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಸಿಗರೇಟಿನಿಂದ ಸಂತ್ರಸ್ತೆಯ ಖಾಸಗಿ ಅಂಗಗಳನ್ನು ಸುಟ್ಟಿದ್ದಾರೆ. ಸಂತ್ರಸ್ತೆಯ ಎದೆ, ಎರಡೂ ಕೈಗಳ ಮೇಲೆ ಹರಿತವಾದ ಆಯುಧದಿಂದ ಈ ವೇಳೆ ಹಲ್ಲೆ ನಡೆಸಿದ್ದಾರೆ ಪಾಪಿಗಳು.

ಆರೋಪಿಗಳಲ್ಲಿ ಒಬ್ಬ ಈ ಘಟನೆಯನ್ನೂ ವಿಡಿಯೋ ಮಾಡಿದ್ದು, ಇದನ್ನೂ ಯಾರಿಗಾದರೂ ತಿಳಿಸಿದ್ರೆ ವೈರಲ್​ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅತ್ಯಾಚಾರ ಎಸಗಿರುವ ಕುರಿತು ಮಹಿಳೆಯೂ ನೆರೆಹೊರೆ ಪಕ್ಕದವರಲ್ಲಿ ಹಂಚಿಕೊಂಡಿದ್ದು, ನೆರೆಹೊರೆಯವರು ಮಹಿಳಾ ಎನ್‌ಜಿಒಗೆ ಮಾಹಿತಿ ನೀಡಿದ್ದಾರೆ.

ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 376 (ಅತ್ಯಾಚಾರ), 376 ಡಿ (ಸಾಮೂಹಿಕ ಅತ್ಯಾಚಾರ), 377 (ಅಸ್ವಾಭಾವಿಕ ಲೈಂಗಿಕತೆ), 324 (ಹಲ್ಲೆ) ಮತ್ತು ಇತರ ಅಪರಾಧಗಳ ಅಡಿ ಮುಂಬೈ ಕುರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಬಿರುಸಿನ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಇದನ್ನೂಓದಿ:ಶೂಟಿಂಗ್​ ವೇಳೆ ದುರಂತ: ಸ್ಟಂಟ್ ಮಾಸ್ಟರ್ ಸಾವು, ಮತ್ತೋರ್ವರ ಸ್ಥಿತಿ ಗಂಭೀರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.