ETV Bharat / bharat

ಮುನುಗೋಡು ಚುನಾವಣೆ ಫಲಿತಾಂಶ ದೇಶಕ್ಕೆ ಸಂದೇಶ.. ಕೇಂದ್ರದ ವಿರುದ್ಧ ಕೆಸಿಆರ್​​​ ವಾಗ್ದಾಳಿ - ಮುನುಗೋಡು ಕ್ಷೇತ್ರಕ್ಕೆ ಉಪ ಚುನಾವಣೆ

ಕಾಂಗ್ರೆಸ್ ಶಾಸಕ ಕೋಮಟಿ ರಾಜಗೋಪಾಲ ರೆಡ್ಡಿ ರಾಜೀನಾಮೆಯಿಂದ ತೆರವಾಗಿರುವ ಮುನುಗೋಡು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಬೃತಹ್ ಸಮಾವೇಶ ಆಯೋಜನೆ ಮಾಡಿದೆ. ಇದಕ್ಕೂ ಮುನ್ನ ಶನಿವಾರ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್​ ಮುನುಗೋಡು ಕ್ಷೇತ್ರದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ.

KCR
KCR
author img

By

Published : Aug 20, 2022, 10:32 PM IST

ಮುನುಗೋಡು(ತೆಲಂಗಾಣ): ಮುನುಗೋಡು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೋಮಟಿ ರಾಜಗೋಪಾಲ್ ರೆಡ್ಡಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇದೀಗ ಉಪ ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್​ ಶಕ್ತಿ ಪ್ರದರ್ಶನ ನಡೆಸಿದರು. ಮುನುಗೋಡಿನಲ್ಲಿ ಆಯೋಜನೆಗೊಂಡಿದ್ದ ಟಿಆರ್​​​ಎಸ್​​ ಪ್ರಜಾದೀಪ್​ ಸಮಾವೇಶದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಭಾಷಣದ ಉದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆಸಿಆರ್​, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದರು. ತೆಲಂಗಾಣ ವಿಚಾರದಲ್ಲಿ ಕೇಂದ್ರ ಇಬ್ಬಗೆಯ ನೀತಿ ಅನುಸರಿಸುತ್ತಿದೆ. ಕೃಷ್ಣಾ ನದಿ ನೀರಿನ ಹಂಚಿಕೆ ಅಂತಿಮಗೊಂಡಿಲ್ಲ. ಇದರ ಬಗ್ಗೆ ಮನುಗೋಡಿನಲ್ಲಿ ನಡೆಯಲಿರುವ ನಾಳೆಯ ಸಭೆಯಲ್ಲಿ ಅಮಿತ್ ಶಾ ಉತ್ತರ ನೀಡಲಿ ಎಂದು ಆಗ್ರಹಿಸಿದರು. ಈ ಹಿಂದೆ ಈ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಠೇವಣಿ ಕಳೆದುಕೊಂಡಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷಿ ಪಪ್​​ಸೆಟ್​​​ಗಳಿಗೆ ವಿದ್ಯುತ್ ಮೀಟರ್ ಅಳವಡಿಕೆ ಮಾಡುತ್ತೇವೆ ಎನ್ನುತ್ತಾರೆ. ಇದರಿಂದ ರೈತರ ಹೊಟ್ಟೆ ಮೇಲೆ ಹೊಡೆಯಲು ಮುಂದಾಗಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಗುಡುಗಿದರು. ಮುನುಗೋಡಿನಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜಕೀಯ ಪಕ್ಷಗಳ ಚುನಾವಣೆಯಲ್ಲ. ಇದು ರೈತರ ಜೀವನೋಪಾಯದ ಚುನಾವಣೆ. ರೈತ ವಿರೋಧಿ ನೀತಿ, ಕೃಷಿ ಮೋಟಾರ್​​ಗಳಿಗೆ ಮೀಟರ್​​ ಅಳವಡಿಸಲು ಮುಂದಾಗಿರುವ ಬಿಜೆಪಿಗೆ ಮತ ಹಾಕುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೆಸಿಆರ್​ ಪ್ರಶ್ನಿಸಿದರು.

ಇದನ್ನೂ ಓದಿ: ಪ್ರಜಾದೀಪ ಸಮಾವೇಶಕ್ಕೆ ಸಿಎಂ ಕೆಸಿಆರ್​​: ಟ್ರಾಫಿಕ್​ ಜಾಮ್​​ನಿಂದ ಪರದಾಡಿದ ವಾಹನ ಸವಾರರು

ದೇಶದ ಎಲ್ಲ ರಾಜ್ಯಗಳಲ್ಲೂ ಬಿಜೆಪಿಯೇತರ ಸರ್ಕಾರ ಉರುಳಿಸಲು ನರೇಂದ್ರ ಮೋದಿ ಹುನ್ನಾರ ನಡೆಸುತ್ತಿದ್ದಾರೆ. ಇಡಿ, ಸಿಬಿಐ ಬಳಕೆ ಮಾಡಿಕೊಳ್ಳುವ ಮೂಲಕ ಬೆದರಿಕೆ ಹಾಕ್ತಿದ್ದಾರೆ. ಮೋದಿಯ ಈ ಅಹಂಕಾರವೇ ಅವರಿಗೆ ಮುಂದಿನ ದಿನಗಳಲ್ಲಿ ಶತ್ರುವಾಗಿ ಕಾಡಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ಭವಿಷ್ಯ ನುಡಿದರು. ಮುನುಗೋಡು ವಿಧಾನಸಭೆ ಕ್ಷೇತ್ರದಿಂದ ಕೋಮಟಿ ರಾಜಗೋಪಾಲ ರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, ಕಳೆದ 10 ದಿನಗಳ ಹಿಂದೆ ರಾಜೀನಾಮೆ ನೀಡಿದ್ದು, ಮುನುಗೋಡಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಕಮಲ ಮುಡಿಯಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಹೋಗ್ತಾರಾ ಕಾಂಗ್ರೆಸ್​ ಶಾಸಕ?: ಕೋಮಟಿ ರಾಜಗೋಪಾಲ್ ರೆಡ್ಡಿ ಮುಂದಿನ ನಡೆಯೇನು ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.