ಕೊಲ್ಲಂ(ಕೇರಳ): ವೀಸಾ ಕೊಡಿಸುವ ಭರವಸೆ ನೀಡಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇರಳದ ಚಾದಯಮಂಗಲಂನಲ್ಲಿ ಈ ಘಟನೆ ನಡೆದಿದೆ. ವೀಸಾ ಪಡೆದುಕೊಳ್ಳಲು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ತಿಳಿದ ಮಹಿಳೆ ವ್ಯಕ್ತಿಯೊಬ್ಬನ ಮನೆಗೆ ಬಂದಿದ್ದಾಳೆ. ಈ ವೇಳೆ ಆಕೆಯನ್ನ ಮೂರು ದಿನಗಳ ಕಾಲ ಗೃಹಬಂಧನದಲ್ಲಿಟ್ಟುಕೊಂಡು ಅತ್ಯಾಚಾರ ಎಸಗಿದ್ದಾನೆ. ಮೇ 9ರಂದು ಈ ಘಟನೆ ನಡೆದಿದ್ದು, ಮೇ 11ರ ರಾತ್ರಿ ಆಕೆಯ ಕೊಲೆ ಮಾಡಲು ಯತ್ನಿಸಿದ್ದಾನೆ.
ಸುತ್ತಿಗೆಯಿಂದ ಹಲ್ಲೆ ಮಾಡಲು ಯತ್ನಿಸಿದಾಗ ತಲೆಗೆ ಪೆಟ್ಟು ಬಿದ್ದಿದೆ. ಈ ವೇಳೆ, ಮನೆಯಿಂದ ಹೊರಗೆ ಓಡಿ ಹೋಗಿ ಪಕ್ಕದ ಮನೆಯಲ್ಲಿ ಆಶ್ರಯ ಪಡೆದಿದ್ದಾಳೆ. ನೆರೆಹೊರೆಯವರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಆಗಮಿಸಿರುವ ಪೊಲೀಸರು ತಿರುವನಂತಪುರಂ ವೈದ್ಯಕೀಯ ಕಾಲೇಜ್ಗೆ ದಾಖಲು ಮಾಡಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯ ಬಂಧನ ಮಾಡಲಾಗಿದ್ದು, ಆತನ ಮೇಲೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಅನೇಕ ಕ್ರಿಮಿನಲ್ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.