ನವದೆಹಲಿ: ಮುಸ್ಲಿಂ ಸಂಘಟನೆಯೊಂದು ಶಾಂತಿ ಮತ್ತು ಸೌಹಾರ್ದತೆಯಿಂದ ಈದ್ ಹಬ್ಬವನ್ನು ಆಚರಿಸುವಂತೆ ಹಲವು ಮಾರ್ಗಸೂಚಿಗಳೊಂದಿಗೆ ಸಮುದಾಯಕ್ಕೆ ಮನವಿ ಮಾಡಿದೆ. ಸೋಮವಾರ IMPAR ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಮುಖವಾಗಿ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ತಪ್ಪಿಸುವಂತೆ ವಿನಂತಿಸಿಕೊಳ್ಳಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ಸರಿಯಾದ ಕ್ರಮವಲ್ಲ. ಒಂದು ವೇಳೆ ತುಂಬಾ ಜನ ಇದ್ದರೇ, ಜಮಾತ್ಗಳನ್ನು ಬಳಸಿಕೊಳ್ಳಬೇಕು ಎಂದು IMPAR ಮಾರ್ಗಸೂಚಿ ಹೇಳುತ್ತದೆ. ಮಸೀದಿಗಳಲ್ಲಿನ ಆಜಾನ್ ಶಬ್ಧವನ್ನು ಕಡಿಮೆ ಮಾಡುವಂತೆ ಸೂಚಿಸಿದೆ. ನಮಾಜ್ ಅಥವಾ ಮೆರವಣಿಗೆ ಸಮಯದಲ್ಲಿ ಜನಸಂದಣಿ ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುವಂತೆ IMPAR ಸೂಚಿಸಿದೆ. ಅಲ್ಲದೇ ಯಾವುದೇ ರೀತಿಯ ಕೋಮು ಗಲಭೆಗೆ ಅವಕಾಶ ನೀಡದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ: ಗುಜರಾತ್ನಲ್ಲಿ AAP ಕಾರ್ಯಕರ್ತರ ಮೇಲೆ ಬಿಜೆಪಿ ಹಲ್ಲೆ..ವಿಡಿಯೋ ಸಮೇತ ಟ್ವೀಟ್ ಮಾಡಿದ ಕೇಜ್ರಿವಾಲ್!