ETV Bharat / bharat

ಕರ್ನಾಟಕ ಸರ್ಕಾರ ಆದೇಶ ಹಿಂಪಡೆದರೆ ಹಿಜಾಬ್​ ವಿವಾದವು ತಾನಾಗಿಯೇ ಅಂತ್ಯವಾಗಲಿದೆ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ

ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧದ ಆದೇಶ ಹಿಂಪಡೆದರೆ ವಿವಾದವು ಸ್ವತಃ ಅಂತ್ಯವಾಗಲಿದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿದೆ.

Muslim Personal Law Board appeals  Karnataka government to withdraw hijab order  hijab ban in Karnataka  ಕರ್ನಾಟಕ ಸರ್ಕಾರ ಆದೇಶ  ಹಿಜಾಬ್​ ವಿವಾದವು ತಾನಾಗಿಯೇ ಅಂತ್ಯ  ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ  ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧದ ಆದೇಶ  ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ವಿಭಿನ್ನ ತೀರ್ಪು  ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ  ನ್ಯಾಯಾಧೀಶರ ಮಧ್ಯ ಭಿನ್ನಾಭಿಪ್ರಾಯ  ಸುಪ್ರೀಂ ನ್ಯಾಯಮೂರ್ತಿ ಅಂಗಳಕ್ಕೆ ಹಿಜಾಬ್​ ವಿವಾದ
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ
author img

By

Published : Oct 14, 2022, 1:00 PM IST

ನವದೆಹಲಿ/ಬೆಂಗಳೂರು: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನ ವಿಭಿನ್ನ ತೀರ್ಪು ನಂತರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಆದೇಶವನ್ನು ಕರ್ನಾಟಕ ಸರ್ಕಾರ ಹಿಂಪಡೆಯಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಗುರುವಾರ ಮನವಿ ಮಾಡಿದೆ. ಒಂದು ವೇಳೆ ಸರ್ಕಾರ ಆದೇಶವನ್ನು ಹಿಂಪಡದ್ರೆ ಇಡೀ ವಿವಾದವೇ ಕೊನೆಗೊಳ್ಳುತ್ತದೆ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಆದೇಶವು ಸಂವಿಧಾನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ತತ್ವಗಳಿಗೆ ಅನುಗುಣವಾಗಿದೆ ಎಂದು ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಪ್ರಕಟಣೆ ಹೊರಡಿಸುವ ಮೂಲಕ ಹೇಳಿದ್ದಾರೆ.

ನ್ಯಾಯಮೂರ್ತಿ ಧುಲಿಯಾ ಅವರು ಹೆಣ್ಣುಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಅವರ ಶಿಕ್ಷಣದಲ್ಲಿನ ಅಡೆತಡೆಗಳನ್ನು ನಿವಾರಿಸಲು ಗಮನಹರಿಸಿದ್ದಾರೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರ ತೀರ್ಪಿನಲ್ಲಿ ಈ ಅಂಶ ಕಾಣೆಯಾಗಿದ್ದರೂ ಈ ಅಂಶವನ್ನು ಅವರು ಸ್ವಾಗತಿಸಬೇಕು. ಈ ತೀರ್ಪಿನಲ್ಲಿ ನ್ಯಾಯಾಧೀಶರ ಮಧ್ಯ ಭಿನ್ನಾಭಿಪ್ರಾಯಗಳಿವೆ. ಹಿಜಾಬ್‌ಗೆ ಸಂಬಂಧಿಸಿದ ಆದೇಶವನ್ನು ಹಿಂಪಡೆಯಲು ಕರ್ನಾಟಕ ಸರ್ಕಾರವನ್ನು ಕೋರಲಾಗಿದೆ. ಕರ್ನಾಟಕ ಸರ್ಕಾರ ಈ ಆದೇಶವನ್ನು ಹಿಂಪಡೆದರೆ ಇಡೀ ವಿವಾದ ತಾನಾಗಿಯೇ ಅಂತ್ಯವಾಗಲಿದೆ ಎಂದು ರಹಮಾನಿ ಹೇಳಿದರು.

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಅಂಗಳಕ್ಕೆ ಹಿಜಾಬ್​ ವಿವಾದ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಬೇಕೇ ಅಥವಾ ಬೇಡವೇ? ಈಗ ಅದನ್ನು ಸುಪ್ರೀಂ ಕೋರ್ಟ್‌ನ ದೊಡ್ಡ ಪೀಠವು ನಿರ್ಧರಿಸುತ್ತದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಇದೀಗ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಇಬ್ಬರು ನ್ಯಾಯಮೂರ್ತಿಗಳ ಅಭಿಪ್ರಾಯ ಭಿನ್ನವಾಗಿತ್ತು. ಹೀಗಾಗಿ ಪ್ರಕರಣ ಇದೀಗ ವಿಸ್ತೃತ ಪೀಠದ ಮೆಟ್ಟಿಲೇರಿದೆ.

ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಭಾಗವಲ್ಲ ಎಂದು ನ್ಯಾಯಾಲಯ ಹೇಳಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ವಜಾಗೊಳಿಸಿತ್ತು.

ಏನಿದು ಹಿಜಾಬ್​ ಪ್ರಕರಣ: ಕರ್ನಾಟಕದಲ್ಲಿ ಹಿಜಾಬ್ ವಿವಾದದ ಕಥೆ ಕಳೆದ ವರ್ಷ ಡಿಸೆಂಬರ್ 31 ರಂದು ಪ್ರಾರಂಭವಾಯಿತು. ಆಗ ಹಿಜಾಬ್ ಧರಿಸಿ ಉಡುಪಿಯ ಸರ್ಕಾರಿ ಪಿಯು ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರನ್ನು ತರಗತಿಗೆ ಬರದಂತೆ ತಡೆದಿದ್ದಾರೆ. ಇದು ಕಾಲೇಜಿನ ಹೊರಗೆ ಪ್ರತಿಭಟನೆಗೆ ಕಾರಣವಾಯಿತು. ಇದರ ನಂತರ, ಹಿಜಾಬ್ ಬಗ್ಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು. ಮುಸ್ಲಿಮ್ ಹುಡುಗಿಯರು ಹಿಜಾಬ್ ಧರಿಸಿ ತರಗತಿಗೆ ಹೋಗಬೇಕೆಂಬ ಒತ್ತಾಯಕ್ಕೆ ಮಣಿದಿದ್ದರು. ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಕೊರಳಲ್ಲಿ ಹಾಕಿಕೊಂಡು ಕಾಲೇಜಿಗೆ ಹೋಗಲಾರಂಭಿಸಿದರು.

ಇದರಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಎಲ್ಲಾ ಧಾರ್ಮಿಕ ಬಟ್ಟೆಗಳನ್ನು ಶಾಲಾ-ಕಾಲೇಜುಗಳಲ್ಲಿ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಹಿಜಾಬ್​ ವಿವಾದ ಕುರಿತು 5 ಫೆಬ್ರವರಿ 2022 ರಂದು ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿತು.

ಕರ್ನಾಟಕ ಹೈಕೋರ್ಟ್‌ನ ಈ ಆದೇಶವನ್ನೂ ಪ್ರಶ್ನಿಸಲಾಗಿತ್ತು. ಇದರೊಂದಿಗೆ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಈ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತು. ನಂತರ ಈ ವಿಷಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರರ ವಕೀಲರು ಹಿಜಾಬ್ ಧರಿಸುವುದನ್ನು ನಿಲ್ಲಿಸುವುದರಿಂದ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅಪಾಯವಿದೆ ಮತ್ತು ಅವರು ತರಗತಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು. ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿಗೆ ಕರ್ನಾಟಕ ಸರ್ಕಾರ ಯಾವ ರೀತಿ ಸ್ಪಂಧಿಸುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕಾದುನೋಡ್ಬೇಕಾಗಿದೆ.

ಓದಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದಿದ್ದೇನು.. ಹಿಜಾಬ್​ ಧರಿಸಲು ಅವಕಾಶ ಇದೆಯೋ, ಇಲ್ಲವೋ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.