ಪೂಂಚ್ (ಜಮ್ಮು ಮತ್ತು ಕಾಶ್ಮೀರ): ದೇಶದಲ್ಲಿ ಕೋವಿಡ್ ಆರ್ಭಟಕ್ಕೆ ದಿನನಿತ್ಯ ಸಾವಿರಾರು ಮಂದಿ ಉಸಿರು ನಿಲ್ಲಿಸುತ್ತಿದ್ದಾರೆ. ಹಲವೆಡೆ ಚಿತಾಗಾರಗಳಲ್ಲಿ ಬಿಡುವಿಲ್ಲದೆ ಶವಗಳ ದಹನ ಕಾರ್ಯ ಮಾಡಲಾಗುತ್ತಿದೆ. ಇನ್ನೊಂದೆಡೆ ಕೋವಿಡ್ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೂ ಕುಟುಂಬಸ್ಥರು ಹಿಂದೇಟು ಹಾಕುವಂತಹ ಪರಿಸ್ಥಿತಿಯೂ ಇದೆ.
ಈ ನಡುವೆ ಕೋವಿಡ್ನಿಂದ ಮೃತಪಟ್ಟ ಅನಾಥೆಯ ಶವಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಅನಾಥೆಯೋರ್ವಳು ಕೋವಿಡ್ನಿಂದ ಮೃತಪಟ್ಟಿದ್ದು, ಆಕೆಯ ಅಂತ್ಯಸಂಸ್ಕಾರಕ್ಕೆ ಯಾರೊಬ್ಬರು ಮುಂದೆ ಬಂದಿರಲಿಲ್ಲ. ಬಳಿಕ ಅಲ್ಲಿನ ಸ್ಥಳೀಯ ಮುಸ್ಲಿಂ ಯುವಕರು ಅನಾಥೆಯ ದೇಹಕ್ಕೆ ಮುಕ್ತಿ ನೀಡಲು ಮುಂದಾಗಿದ್ದಾರೆ.
ಪಿಪಿಇ ಕಿಟ್ ಧರಿಸಿ ಕೋವಿಡ್ ಶವದ ಅಂತ್ಯಕ್ರಿಯೆ ನೆರವೇರಿಸಿ ಮಾದರಿಯಾಗಿದ್ದಾರೆ.