ಪುದುಚೇರಿ: ನಾಲ್ಕು ರಾಜ್ಯಗಳ ಜೊತೆ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಚುನಾವಣೆ ನಡೆದಿತ್ತು. ಇಲ್ಲಿ ಎನ್ಡಿಎ ಸರ್ಕಾರ ಬಹುಮತ ಪಡೆದುಕೊಂಡಿದ್ದು, ಇಂದು ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಎಐಎನ್ಆರ್ಸಿ ಮುಖ್ಯಸ್ಥ ಎನ್. ರಂಗಸ್ವಾಮಿ ಇಂದು ನೂತನವಾಗಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸಾಯಿ ಸೌಂದರ್ಯರಾಜನ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಪುದುಚೇರಿಯಲ್ಲಿ ಎನ್ಡಿಎ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ 71 ವರ್ಷದ ರಂಗಸ್ವಾಮಿ ಈಗಾಗಲೇ ಮೂರು ಸಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೊಂದು ಅವರಿಗೆ ಸಿಎಂ ಆಗಿದ್ದಾರೆ.
ಇದನ್ನೂ ಓದಿ: 10 ರೂ. ತೆಗೆದುಕೊಂಡಿದ್ದಕ್ಕೆ ಹೆಂಡ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗಂಡ.. ವಿಡಿಯೋ ವೈರಲ್
ಕೋವಿಡ್ ಕಾರಣ ಚುನಾಯಿತ ಶಾಸಕರು, ಪಕ್ಷದ ಹಿರಿಯ ನಾಯಕರು, ಸರ್ಕಾರ ಮುಖ್ಯ ಕಾರ್ಯದರ್ಶಿ ಅಶ್ವನಿ ಕುಮಾರ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಂದಿನ ಕೆಲ ದಿನಗಳ ನಂತರ ಬಿಜೆಪಿ ಹಾಗೂ ಎಐಎನ್ಆರ್ಸಿ ಪಕ್ಷ ಸೇರಿ ನಿರ್ಧಾರ ಕೈಗೊಂಡ ಬಳಿಕ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಪುದುಚೇರಿಯ 30 ಕ್ಷೇತ್ರಗಳ ಪೈಕಿ ಎನ್ಡಿಎ 16 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದ್ದು, ಬಿಜೆಪಿ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು.