ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯ್ವರ್ಗಿಯಾ ಮತ್ತು ರಾಜ್ಯದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
ಮುಂಬರುವ ಚುನಾವಣೆಯಲ್ಲಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪಕ್ಷ ಪ್ರಯತ್ನಿಸುತ್ತಿದೆ. ಇಂದಿನ ಈ ಸಭೆಯಲ್ಲಿ ಹಲವು ಕೇಂದ್ರ ಸಚಿವರುಗಳು ಕೂಡ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಂಜೆ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿಯನ್ನೂ ಓದಿ: ಪ್ರಧಾನಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ; ರಾಹುಲ್ ಗಾಂಧಿ ವಾಗ್ದಾಳಿ
ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಜನವರಿ 23ರಂದು ಕೋಲ್ಕತ್ತಾಗೆ ಭೇಟಿ ನೀಡಲಿದ್ದಾರೆ. ಇನ್ನೂ ಜನವರಿ 30ರಿಂದ ಅಮಿತ್ ಶಾ ಎರಡು ದಿನಗಳ ಕಾಲ ಬಂಗಾಳ ಪ್ರವಾಸಕ್ಕೆ ನಿರ್ಧರಿಸಲಾಗಿದೆ.