ETV Bharat / bharat

ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿರುದ್ಧ ನಾನಾ ಪಟೋಲೆ ಗರಂ - ಬೊಮ್ಮಾಯಿ ಹೇಳಿಕೆ ವಿರುದ್ಧ ನಾನಾ ಪಟೋಲೆ ಗರಂ

ಗಡಿ ಭಾಗದಲ್ಲಿ ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆ ವಿರುದ್ಧ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Nana Patole
ನಾನಾ ಪಾಟೋಳೆ
author img

By

Published : Mar 16, 2023, 4:26 PM IST

ಮುಂಬೈ(ಮಹಾರಾಷ್ಟ್ರ): ಗಡಿ ಭಾಗದಲ್ಲಿ ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಬೊಮ್ಮಾಯಿ ಹೇಳಿಕೆಯಿಂದ ಬಿಜೆಪಿ ನಿಜ ಮುಖ ಬಯಲಾಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ವಿಧಾನ ಭವನದಲ್ಲಿ ಆರೋಪಿಸಿದ್ದಾರೆ.

''ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗಡಿ ವಿಚಾರದಲ್ಲಿ ತಳೆದಿರುವ ನಿಲುವಿನಿಂದ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ. ಬಿಜೆಪಿ ಸುಳ್ಳು ಹೇಳುವ ಪಕ್ಷವಾಗಿದೆ. ಜನರ ವಿರುದ್ಧದ ನಿಲುವನ್ನು ಹೊಂದಿರುವ ಪಕ್ಷವಾಗಿದೆ ಎಂದು ನಾನಾ ಪಟೋಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನಾ ಪಟೋಳೆ ತೀವ್ರ ಅಸಮಾಧಾನ: ''ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ರಾಜ್ಯ ಸರ್ಕಾರ ಕೆಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಕರ್ನಾಟಕದ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವಾಗ ಗಡಿ ಭಾಗದ ಜನತೆಗೆ ಈ ರೀತಿ ಅನ್ಯಾಯ ಆಗುತ್ತಿದ್ದರೆ, ಜನರು ಯಾರ ಆಶಾಕಿರಣದಲ್ಲಿ ಬದುಕಬೇಕು ಎಂಬ ಪ್ರಶ್ನೆ ಕಾಡುತ್ತಿದೆ ಎಂದು ನಾನಾ ಪಟೋಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಅಜಿತ್ ಪವಾರ್ ಕ್ಷಮೆ ಕೇಳಿದ ದೇವೇಂದ್ರ ಫಡ್ನವೀಸ್: ಕಾರಣವೇನು ಗೊತ್ತಾ?

ಟಿಕೆಟ್​ ಹಂಚಿಕೆ ಸುದ್ದಿಯಲ್ಲಿ ಸತ್ಯಾಂಶವಿಲ್ಲ: ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಮಹಾವಿಕಾಸ್ ಅಘಾಡಿ ಸರ್ಕಾರ ಸಿದ್ಧತೆ ಆರಂಭಿಸಿದೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ಈಗಾಗಲೇ ನಮ್ಮ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕ ರಾಹುಲ್ ಗಾಂಧಿ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಾತ್ರವನ್ನು ಸ್ಪಷ್ಟಪಡಿಸಲಾಗಿದೆ. ಬಿಜೆಪಿ ವಿರುದ್ಧ ಬರುವವರನ್ನು ಒಗ್ಗೂಡಿಸಿ ಚುನಾವಣೆ ಎದುರಿಸಲಿದ್ದೇವೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಸಂಖ್ಯೆಯನ್ನು ಕಾಂಗ್ರೆಸ್ ಪರಾಮರ್ಶಿಸಿ, ಅದರ ಆಧಾರದ ಮೇಲೆ ಟಿಕೆಟ್​ಗಳನ್ನು ಹಂಚಿಕೆ ಮಾಡಲಿದೆ. ಆದರೆ, ಈ ಬಗ್ಗೆ ಇನ್ನೂ ಹೆಚ್ಚಿನ ಚರ್ಚೆ ನಡೆಬೇಕಿದೆ. ಟಿಕೆಟ್​ ಹಂಚಿಕೆ ಕುರಿತ ಕೇಳಿ ಬರುತ್ತಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ನಾನಾ ಪಟೋಲೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ತೆಲಂಗಾಣ ಸಿಎಂ ಪುತ್ರಿ ಕವಿತಾ ಇಡಿ ವಿಚಾರಣೆ: ಬಿಆರ್‌ಎಸ್-ಬಿಜೆಪಿ ಪೋಸ್ಟರ್ ವಾರ್

ಬಿಜೆಪಿ ಸರ್ಕಾರ ನೌಕರರ ವಿರೋಧಿ: ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಹೊರಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಈ ಕುರಿತು ಮಾತನಾಡಿದ ನಾನಾ ಪಟೋಲೆ ಅವರು, ಸುಳ್ಳಿನ ಸರ್ಕಾರದಿಂದ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಬಿಜೆಪಿ ಪಕ್ಷ ತನ್ನ ಜೇಬು ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಈ ಸರ್ಕಾರ ನೌಕರರ ವಿರೋಧಿಯಾಗಿದೆ ಎಂದು ಅವರು ಗರಂ ಆದರು.

ಇದನ್ನೂ ಓದಿ: "ಮುಝೇ ಚಲ್ತೆ ಜಾನಾ ಹೈ..": ಬಿಜೆಪಿಯಿಂದ ಮೋದಿ ರಾಜಕೀಯ ಪಯಣದ ವಿಶೇಷ ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.