ಮುಜಫರ್ನಗರ (ಉತ್ತರ ಪ್ರದೇಶ): ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ನರೇಶ್ ಟಿಕಾಯತ್ ಇಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ತುರ್ತು ಮಹಾಪಂಚಾಯಿತಿ ಕರೆದಿದ್ದಾರೆ.
ಬಿಕೆಯು ಮುಖ್ಯಸ್ಥ ರಾಕೇಶ್ ಅವರ ನೇತೃತ್ವದಲ್ಲಿ ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಉತ್ತರಪ್ರದೇಶ ಪೊಲೀಸರು ಆದೇಶ ನೀಡಿದ್ದು, ಸ್ಥಳದಲ್ಲಿ ಪೊಲೀಸರು ಸುತ್ತುವರೆದಿದ್ದಾರೆ ಎಂಬ ಮಾಹಿತಿ ಬೆನ್ನಲ್ಲೇ ಮುಜಾಫರ್‌ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ನರೇಶ್ ಟಿಕಾಯತ್ ಮಹಾಪಂಚಾಯಿತಿ ಕರೆದಿದ್ದಾರೆ. ರಾಕೇಶ್ ಅವರ ಮೇಲೆ ಪ್ರಕರಣಗಳನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಾವು ಸ್ಥಳದಿಂದ ಕದಲುವುದಿಲ್ಲ, ಪ್ರತಿಭಟನೆ ಕೈ ಬಿಡುವುದಿಲ್ಲ: ರಾಕೇಶ್ ಟಿಕೈತ್
ರಾಕೇಶ್ ಅವರ ಮೇಲೆ ಸುಳ್ಳು ಕೇಸ್ಗಳನ್ನು ದಾಖಲಿಸಲಾಗಿದೆ. ಬಲವಂತವಾಗಿ ಗಾಜಿಪುರ ಗಡಿಯಿಂದ ಪ್ರತಿಭಟನಾಕಾರರನ್ನು ಓಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ನರೇಶ್ ಆರೋಪಿಸಿದ್ದಾರೆ.