ETV Bharat / bharat

National Girl Child Day: ಲಿಂಗಾನುಪಾತದಲ್ಲಿ ಸುಧಾರಣೆ, ಪುರುಷರಿಗಿಂತ ಮಹಿಳೆಯರ ಸಂಖ್ಯೆಯೇ ಹೆಚ್ಚು! - ಲಿಂಗಾನುಪಾತದಲ್ಲಿ ಸುಧಾರಣೆ, ಪುರುಷರಿಗಿಂತ ಮಹಿಳೆಯರ ಸಂಖ್ಯೆಯೇ ಹೆಚ್ಚು

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಪ್ರತಿ ವರ್ಷ ಜನವರಿ 24 ರಂದು ಆಚರಿಸಲಾಗುತ್ತದೆ. ಈ ದಿನ ಒಳ್ಳೆಯ ಸಂಕೇತವಾಗಿ ಮಹಿಳಾ ಜನಸಂಖ್ಯೆಯು ಮೊದಲ ಬಾರಿಗೆ ಪುರುಷರಿಗಿಂತ ಹೆಚ್ಚಾಗಿದೆ. ಇದೀಗ ಗಂಡು ಮತ್ತು ಹೆಣ್ಣು ಮಕ್ಕಳ ನಡುವಿನ ಅನುಪಾತವು 1,000ಕ್ಕೆ 1,020 ಇದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
author img

By

Published : Jan 24, 2022, 3:27 PM IST

Updated : Jan 24, 2022, 3:32 PM IST

ಪಾಟ್ನಾ: ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನವಿದೆ. ಈ ದೇಶದಲ್ಲಿ ಮಹಿಳೆಯರನ್ನು ಪೂಜಿಸಲಾಗುತ್ತದೆ. ಆದ್ರೂ ಸ್ತ್ರೀಯರ ಮೇಲಾಗುತ್ತಿರುವ ದೌರ್ಜನ್ಯ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ. ಗಂಡು-ಹೆಣ್ಣು ಇಬ್ಬರೂ ಸಮಾನರು ಎಂಬ ಭಾವನೆ ಇವತ್ತಿಗೂ ಬಂದಿಲ್ಲ. ಈ ಎಲ್ಲಾ ಅಸಮಾನತೆಯನ್ನು ಹೋಗಲಾಡಿಸಲು 2008 ರಿಂದ ಪ್ರತಿ ವರ್ಷ ಜನವರಿ 24 ರಂದು ದೇಶದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ದೇಶ: ಈ ದಿನವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೇತೃತ್ವದಲ್ಲಿ ನಡೆಸಲಾಗುತ್ತದೆ. ಈ ವಿಶೇಷ ದಿನದಂದು ಜಾಗೃತಿ ಮೂಡಿಸುವುದರ ಜೊತೆಗೆ ಹೆಣ್ಣು ಮಕ್ಕಳ ಹಕ್ಕುಗಳು, ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಅವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಹೆಣ್ಣು ಶಿಶುಹತ್ಯೆ, ಲಿಂಗ ಅಸಮಾನತೆ ಮತ್ತು ದೈಹಿಕ ದೌರ್ಜನ್ಯದಂತಹ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಗುರಿಯನ್ನು ಈ ದಿನ ಹೊಂದಲಾಗಿದೆ.

ಮಾಹಿತಿಯ ಪ್ರಕಾರ, 1990 ರಲ್ಲಿ ಗಂಡು ಮತ್ತು ಹೆಣ್ಣಿನ ಲಿಂಗಾನುಪಾತವು 1000 ಕ್ಕೆ 927ರಷ್ಟು ಇತ್ತು. ಆದ್ರೆ 2005-06 ರಲ್ಲಿ ಇದು 1,000ಕ್ಕೆ 1,000ದಷ್ಟು ಇದ್ದು, ಮತ್ತೆ 2015-16 ರಲ್ಲಿ ಇದು 1,000 ಕ್ಕೆ 991 ಆಗಿತ್ತು. ಇದೀಗ ಲಿಂಗಾನುಪಾತವು 1,000ಕ್ಕೆ 1,020 ಆಗಿದೆ. ಅಂದರೆ ಸಾವಿರ ಪುರುಷರಿಗೆ ಸಾವಿರದ ಇಪ್ಪತ್ತು ಮಹಿಳೆಯರು ಇದ್ದಾರೆ ಎಂದರ್ಥ.

ಇದನ್ನೂ ಓದಿ: ಮಕ್ಕಳಲ್ಲಿ ಅಲರ್ಜಿ ನಿಯಂತ್ರಣ ಹೇಗೆ? ಹೀಗಿವೆ ಕೆಲವು ಮಾರ್ಗಗಳು..

ಪುರುಷ ಮತ್ತು ಮಹಿಳೆಯರ ನಡುವಿನ ಅಂಕಿ-ಅಂಶಗಳ ಅನುಪಾತದಲ್ಲಿನ ಈ ಬದಲಾವಣೆಯು 'ಒಳ್ಳೆಯ ಸಂಕೇತ'ವಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಈ ರೀತಿ ಆಗಿದೆ. 1990 ರಲ್ಲಿ, ನೊಬೆಲ್ ಪ್ರಶಸ್ತಿ ವಿಜೇತ ಮತ್ತು ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ಒಂದು ಲೇಖನವನ್ನು ಬರೆದಿದ್ದರು. ಅದರಲ್ಲಿ ಅವರು ದೇಶದಲ್ಲಿನ ಲಿಂಗಾನುಪಾತದ ಬಗ್ಗೆ ಉಲ್ಲೇಖ ಮಾಡಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಹೆಣ್ಣು ಮಗುವಿನ ಮಹತ್ವದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದರ ಜೊತೆಗೆ ಅವರಿಗೆ ಶಿಕ್ಷಣವನ್ನು ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ನಿಸ್ಸಂದೇಹವಾಗಿ, ದೇಶವು ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಹೆಣ್ಣುಮಕ್ಕಳ ಬಗ್ಗೆ ಸಮಾಜದ ಕೆಲವು ವರ್ಗಗಳಲ್ಲಿ 'ತಾರತಮ್ಯ' ಅಥವಾ 'ಪಕ್ಷಪಾತದ ಚಿಂತನೆ' ಇನ್ನೂ ಚಾಲ್ತಿಯಲ್ಲಿದೆ.

ಜ.24 ನಾರಿ ಶಕ್ತಿ ದಿನ: ಜನವರಿ 24 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಅಧಿಕಾರ ವಹಿಸಿಕೊಂಡರು. ಆದ್ದರಿಂದ ಇದನ್ನು ನಾರಿ ಶಕ್ತಿ ದಿನವೆಂದು ಸಹ ನೆನಪಿಸಿಕೊಳ್ಳಲಾಗುತ್ತದೆ. ಈ ವರ್ಷ ಜನವರಿ 24 ರಂದು 14ನೇ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ಹೆಣ್ಣುಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಭವಿಷ್ಯದ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನಹರಿಸಲಾಗಿದೆ.

ಪ್ರತಿ ವರ್ಷ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ವಿವಿಧ ಥೀಮ್​​ನೊಂದಿಗೆ ಆಚರಿಸಲಾಗುತ್ತದೆ. 2021ರಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯ ಉದ್ದೇಶವೆಂದರೇ 'ಡಿಜಿಟಲ್ ಪೀಳಿಗೆಯೇ, ನಮ್ಮ ಪೀಳಿಗೆ' ಆಗಿತ್ತು. ಅದೇ ರೀತಿ 2020ರಲ್ಲಿ ಹೆಣ್ಣು ಮಕ್ಕಳ ದಿನದ ಘೋಷವಾಕ್ಯ 'ನನ್ನ ಧ್ವನಿಯೇ ನಮ್ಮ ಸಾಮಾನ್ಯ ಭವಿಷ್ಯ' ಎಂಬುದಾಗಿತ್ತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿವೆ. ಅದಲ್ಲದೆ, ಹೆಣ್ಣುಮಕ್ಕಳನ್ನು ಕೀಳಾಗಿ ಕಾಣುವುದನ್ನು ನಿಲ್ಲಿಸುವುದರ ಜೊತೆಗೆ ಸಭ್ಯ ಮತ್ತು ಆರೋಗ್ಯಕರ ಜೀವನವನ್ನು ನಡೆಸಲು ಅವರ ಹಕ್ಕುಗಳು ಹಾಗೂ ಸವಲತ್ತುಗಳನ್ನು ನೀಡುವ ಪ್ರಯತ್ನಗಳು ನಡೆಯುತ್ತಿವೆ.

ಭಾರತದಲ್ಲಿ ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ಅಕ್ಟೋಬರ್ 11 ಅನ್ನು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ (NHFS-5) ದತ್ತಾಂಶದ ಪ್ರಕಾರ, ಹೆಣ್ಣು ಮತ್ತು ಪುರುಷರ ನಡುವಿನ ಲಿಂಗಾನುಪಾತವು ಈಗ 1,020:1,000 ತಲುಪಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 24, 2022, 3:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.