ETV Bharat / bharat

ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್ ಗಾಂಧಿಗೆ ಇಡಿಯಿಂದ ಹೊಸ ಸಮನ್ಸ್ ಜಾರಿ - ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಜೂನ್‌ 13ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದೆ..

Congress leader Rahul Gandhi
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
author img

By

Published : Jun 3, 2022, 12:38 PM IST

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ದಿನಾಂಕ ಕೋರಿರುವ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ.

ರಾಹುಲ್ ಗಾಂಧಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಹುಲ್ ಇಡಿ ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ್ದರು. ಕಾಂಗ್ರೆಸ್​​ ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಮೇ 20 ರಿಂದ ಮೇ 23ರವರೆಗೆ ಲಂಡನ್‌ನಲ್ಲಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 19ರಂದು ಭಾರತದಿಂದ ಹೋಗಿದ್ದಾರೆ. ಅಂದು ಹೋದವರು ಇನ್ನೂ ಸ್ವದೇಶಕ್ಕೆ ಹಿಂತಿರುಗಿಲ್ಲ. ಜೂನ್‌ 5ರಂದು ರಾಹುಲ್‌ ದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ.

  • Enforcement Directorate issues fresh summons to Congress leader Rahul Gandhi to appear before investigators on June 13 in National Herald case: Official sources

    (file pic) pic.twitter.com/jKaQ3nzCES

    — ANI (@ANI) June 3, 2022 " class="align-text-top noRightClick twitterSection" data=" ">

ಏನಿದು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ?: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಪಕ್ಷದ ಪ್ರಚಾರಕ್ಕಾಗಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇತ್ತೀಚೆಗೆ ಪ್ರಕರಣ ದಾಖಲಿಸಲಾಗಿದೆ. ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ ಗಾಂಧಿ, ಪುತ್ರ ರಾಹುಲ್​​ಗೆ ಸಮನ್ಸ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.