ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದೂ ಕೂಡಾ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳೆದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನಿನ್ನೆ 6 ಗಂಟೆಗಳ ಸುದೀರ್ಘ ವಿಚಾರಣೆ ನಡೆದಿತ್ತು. ಜುಲೈ 21ರಂದು ಸೋನಿಯಾ ಮೊದಲ ಸುತ್ತಿನ ವಿಚಾರಣೆ ಎದುರಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ರ ರಾಹುಲ್ ಗಾಂಧಿಯೂ ಜಾರಿ ನಿರ್ದೇಶನಾಲಯದಿಂದ 5 ದಿನಗಳ ಕಾಲ ವಿಚಾರಣೆಗೆ ಒಳಪಟ್ಟಿದ್ದಾರೆ.
ಇಡಿ ವಿಚಾರಣೆ ವಿರೋಧಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 50 ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ: ಯೂತ್ ಕಾಂಗ್ರೆಸ್ ಅಧ್ಯಕ್ಷರ ತಲೆಗೂದಲು ಹಿಡಿದು ಎಳೆದಾಡಿದ ಪೊಲೀಸರು.. ವಿಡಿಯೋ