ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಒಟ್ಟು 11 ಗಂಟೆಗಳ ಕಾಲ ವಿಚಾರಣೆಗೊಳಪಟ್ಟಿದ್ದಾರೆ. ಈ ವೇಳೆ ಅವರಿಗೆ 100ಕ್ಕೂ ಅಧಿಕ ಪ್ರಶ್ನೆ ಕೇಳಲಾಗಿದೆ ಎಂದು ವರದಿಯಾಗಿದೆ. ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಗಾಂಧಿ ಇಂದೂ ಸಹ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
-
Congress interim president Sonia Gandhi's questioning by ED in the National Herald case concludes: Sources https://t.co/tqSXv8MvnL
— ANI (@ANI) July 27, 2022 " class="align-text-top noRightClick twitterSection" data="
">Congress interim president Sonia Gandhi's questioning by ED in the National Herald case concludes: Sources https://t.co/tqSXv8MvnL
— ANI (@ANI) July 27, 2022Congress interim president Sonia Gandhi's questioning by ED in the National Herald case concludes: Sources https://t.co/tqSXv8MvnL
— ANI (@ANI) July 27, 2022
ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಸೋನಿಯಾ ಗಾಂಧಿ ನಿನ್ನೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅಧಿಕಾರಿಗಳು ಸುಮಾರು 55ಕ್ಕೂ ಹೆಚ್ಚಿನ ಪ್ರಶ್ನೆ ಅವರಿಗೆ ಕೇಳಲಾಗಿದೆ ಎಂದು ತಿಳಿದು ಬಂದಿತ್ತು. ಇದರ ಬೆನ್ನಲ್ಲೇ ಇಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು.
ಬೆಳಗ್ಗೆ 11 ಗಂಟೆಗೆ ಕಚೇರಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಮೂರು ಗಂಟೆಗಳ ಕಾಲ ಅಧಿಕಾರಿಗಳು ಕೇಳಿರುವ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಇಂದಿನ ವಿಚಾರಣೆ ಮುಕ್ತಾಯುದ ಬಳಿಕ ಯಾವುದೇ ರೀತಿಯ ನೋಟಿಸ್ ನೀಡಿಲ್ಲ ಎಂದು ತಿಳಿದು ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಈಗಾಗಲೇ ವಿಚಾರಣೆಗೊಳಪಟ್ಟಿದ್ದಾರೆ.
ಇದನ್ನೂ ಓದಿರಿ: National Herald case: ನಾಳೆ ಮತ್ತೆ ಹಾಜರಾಗುವಂತೆ ಸೋನಿಯಾಗೆ ಇಡಿ ನೋಟಿಸ್
ಕಾಂಗ್ರೆಸ್ ಅಧಿನಾಯಕಿಯನ್ನ ವಿಚಾರಣೆಗೊಳಪಡಿಸಿರುವುದನ್ನ ಖಂಡಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಇಂದು ಸಹ ಪ್ರತಿಭಟನೆ ನಡೆಸಿದರು.