ಲಖನೌ, ಉತ್ತರಪ್ರದೇಶ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ (Uttar Pradesh Assembly polls) ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಸಭೆ ನಡೆಸಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಸಭೆ ನಡೆಸಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಪಕ್ಷದ ಹಿರಿಯ ನಾಯಕರು ಸುಮಾರು ಮೂರೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್, ಉತ್ತರ ಪ್ರದೇಶದ ಇಬ್ಬರು ಡಿಸಿಎಂಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ, ಪಕ್ಷದ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಹಾಜರಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: ನ.26 ರಂದು ಬಿಹಾರದ ಜನರು 'ಮದ್ಯ ಸೇವಿಸುವುದಿಲ್ಲ' ಎಂದು ಪ್ರತಿಜ್ಞೆ ಮಾಡ್ತಾರೆ: ಸಿಎಂ ನಿತೀಶ್ ಕುಮಾರ್