ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು (ಮಂಗಳವಾರ) ನಡೆದ ರಾಜತಾಂತ್ರಿಕ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಷಟ್ಲರ್‌ಗಳಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ 2023ರಲ್ಲಿ ಬ್ಯಾಡ್ಮಿಂಟ್‌ನ್ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಾಗಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
#WATCH | Delhi: Mohammed Shami received the Arjuna Award from President Droupadi Murmu at the National Sports Awards. pic.twitter.com/znIqdjf0qS
— ANI (@ANI) January 9, 2024 " class="align-text-top noRightClick twitterSection" data="
">#WATCH | Delhi: Mohammed Shami received the Arjuna Award from President Droupadi Murmu at the National Sports Awards. pic.twitter.com/znIqdjf0qS
— ANI (@ANI) January 9, 2024#WATCH | Delhi: Mohammed Shami received the Arjuna Award from President Droupadi Murmu at the National Sports Awards. pic.twitter.com/znIqdjf0qS
— ANI (@ANI) January 9, 2024
ಮೊಹಮ್ಮದ್ ಶಮಿ ಮತ್ತು ಪ್ಯಾರಾ ಆರ್ಚರಿಯಲ್ಲಿ ಉದಯಿಸಿದ ತಾರೆ ಶೀತಲ್ ದೇವಿ ಸೇರಿದಂತೆ 26 ಸಾಧಕರಿಗೆ ಅರ್ಜುನ ಪ್ರಶಸ್ತಿ ನೀಡಲಾಯಿತು. ಹಾಗೆಯೇ ಮಹಾವೀರ್ ಪ್ರಸಾದ್ ಸೈನಿ ಮತ್ತು ಇ.ಭಾಸ್ಕರನ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾರತೀಯ ಶಟ್ಲರ್‌ಗಳಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಅವರು ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದರು. ಕಳೆದ ವರ್ಷ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (ಬಿಡಬ್ಲ್ಯುಎಫ್) ಶ್ರೇಯಾಂಕದಲ್ಲಿ ಇವರೆಲ್ಲ ಉತ್ತುಂಗಕ್ಕೇರಿದ್ದರು. ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ ಇವರ ಮುಂದಿನ ಗುರಿಯಾಗಿದೆ.
ಕೇಂದ್ರ ಕ್ರೀಡಾ ಸಚಿವಾಲಯವು ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿದ ನಂತರ ಈಟಿವಿ ಭಾರತ್ನೊಂದಿಗೆ ಮಾತನಾಡಿದ ಚಿರಾಗ್, ''ಇದು ಭಾರತೀಯ ಬ್ಯಾಡ್ಮಿಂಟನ್ ಜೋಡಿ ಗೆದ್ದ ಮೊದಲ ಪ್ರಶಸ್ತಿಯಾಗಿದೆ. ಇದು ಇತರ ಯುವಕರನ್ನು ರಾಕೆಟ್ ಆಯ್ಕೆ ಮಾಡಿಕೊಳ್ಳುವಂತೆ ಹಾಗೂ ಕ್ರೀಡೆಯನ್ನು ವೃತ್ತಿಯಾಗಿ ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೇ, ಈ ಸಾಧನೆಯು ಇತರ ಆಟಗಾರರನ್ನು ಬ್ಯಾಡ್ಮಿಂಟನ್ ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಲು ಪ್ರೇರೇಪಿಸುತ್ತದೆ'' ಎಂದು ನಂಬಿದ್ದೇನೆ ಎಂದರು.
"ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದು ತುಂಬಾ ಸಂತೋಷವಾಗಿದೆ. ಇದು ಒಂದು ಉತ್ತಮ ಭಾವನೆ ಮತ್ತು ಮುಂಬರುವ ವರ್ಷಗಳಲ್ಲಿ ಉತ್ತಮ ಪ್ರದರ್ಶನ ನೀಡಲು ನಮ್ಮನ್ನು ಪ್ರೇರೇಪಿಸುತ್ತದೆ. ನಾವು ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಬಯಸುತ್ತೇವೆ. ಆದರೆ, ಗೆಲುವಿನ ಒತ್ತಡದಲ್ಲಿ ನಾವೇ ಹೊರೆಯಾಗಲು ಬಯಸುವುದಿಲ್ಲ. ನಾವು ನಮ್ಮ ಅನುಭವದಿಂದ ಕಲಿಯುತ್ತೇವೆ ಮತ್ತು ಅದರ ಮೇಲೆ ಸುಧಾರಿಸುತ್ತೇವೆ" ಎಂದು ಸಾತ್ವಿಕ್ ಈಟಿವಿ ಭಾರತ್ಗೆ ಹೇಳಿದ್ದಾರೆ.
ಭಾರತದ ವೇಗಿ ಮೊಹಮ್ಮದ್ ಶಮಿ ಅವರು ಐಸಿಸಿ ಪುರುಷರ ODI ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ತಮ್ಮ ಅಸಾಮಾನ್ಯ ಪ್ರದರ್ಶನಕ್ಕಾಗಿ ಗೌರವಿಸಲ್ಪಟ್ಟರು. ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳೊಂದಿಗೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಅವರು ಎಲೈಟ್ ಪಂದ್ಯಾವಳಿಯಲ್ಲಿ ಅನುಭವಿ ವೇಗಿ ಜಹೀರ್ ಖಾನ್ ಅವರ 44 ವಿಕೆಟ್‌ಗಳನ್ನು ಮೀರಿಸಿ ಭಾರತದ ಒಟ್ಟಾರೆ ಅತಿ ಹೆಚ್ಚು ವಿಕೆಟ್ ಟೇಕರ್ ಆದರು.
ಗ್ರ್ಯಾಂಡ್ ಮಾಸ್ಟರ್ ಆರ್ ವೈಶಾಲಿ, ಚೆಸ್ ಪ್ರತಿಭೆ ಆರ್ ಪ್ರಗ್ನಾನಂದ ಅವರ ಹಿರಿಯ ಸಹೋದರಿಯಾಗಿದ್ದಾರೆ. ಕೊನೇರು ಹಂಪಿ ಮತ್ತು ದ್ರೋಣವಲ್ಲಿ ಹರಿಕಾ ನಂತರ ಭಾರತದ ಮಹಿಳಾ ಗ್ರಾಂಡ್ ಮಾಸ್ಟರ್ ಆಗಿರುವ ದೇಶದ ಮೂರನೇ ಮಹಿಳೆ ಎಂಬ ಗೌರವಕ್ಕೆ ಇವರು ಪಾತ್ರರಾಗಿದ್ದರು.
ಅರ್ಜುನ ಪ್ರಶಸ್ತಿಗೆ ಭಾಜನರಾದ ಶೀತಲ್ ದೇವಿ ಅವರು 2023 ರಲ್ಲಿ ಕಾಂಟಿನೆಂಟಲ್ ಪಂದ್ಯಾವಳಿಯಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಕೈಕಾಲುಗಳಿಲ್ಲದ ಮೊದಲ ಪ್ಯಾರಾ ಆರ್ಚರ್ ಇವರಾಗಿದ್ದಾರೆ. ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರಲ್ಲಿ ಈ ವರ್ಷ ಚೆಸ್ ತರಬೇತುದಾರ ಆರ್ ಬಿ ರಮೇಶ್ ಅವರ ಪಾಲಾಗಿದೆ. ಖೇಲ್ ರತ್ನ ಪ್ರಶಸ್ತಿಯು ₹ 25 ಲಕ್ಷ ಬಹುಮಾನ ಮೊತ್ತ ಹೊಂದಿರುತ್ತದೆ ಮತ್ತು ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳು ₹ 15 ಲಕ್ಷ ನಗದು ಬಹುಮಾನ ಒಳಗೊಂಡಿವೆ.
ಪುರಸ್ಕೃತರು (2023 ಪ್ರಶಸ್ತಿಗಳು): 2023 ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ (ಬ್ಯಾಡ್ಮಿಂಟನ್).
ಅರ್ಜುನ ಪ್ರಶಸ್ತಿ ಪುರಸ್ಕೃತರ ಪಟ್ಟಿ : ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಪಾರುಲ್ ಚೌಧರಿ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ಮೊಹಮ್ಮದ್ ಶಮಿ (ಕ್ರಿಕೆಟ್), ಅನುಷ್ ಅಗರ್ವಾಲಾ ( ಕುದುರೆ ಸವಾರಿ), ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್ ಕುಮಾರ್ (ಕಬಡ್ಡಿ), ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ-ಖೋ), ಪಿಂಕಿ ( ಲಾನ್ ಬೌಲ್‌ಗಳು), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಇಶಾ ಸಿಂಗ್ (ಶೂಟಿಂಗ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ಐಹಿಕಾ ಮುಖರ್ಜಿ (ಟೇಬಲ್ ಟೆನ್ನಿಸ್), ಸುನಿಲ್ ಕುಮಾರ್ (ಕುಸ್ತಿ), ಆಂಟಿಮ್ ಪಂಘಲ್ (ಕುಸ್ತಿ), ನವೋರೆಮ್ ರೋಶಿಬಿನಾ ದೇವಿ (ವುಶು) ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್).
ಅತ್ಯುತ್ತಮ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ (ಸಾಮಾನ್ಯ ವಿಭಾಗ): ಲಲಿತ್ ಕುಮಾರ್ (ಕುಸ್ತಿ), ಆರ್. ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಖ್ಕರ್ (ಮಲ್ಲಖಾಂಬ್).
ಅತ್ಯುತ್ತಮ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ಸಾಧನೆ ವಿಭಾಗ): ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಭಾಸ್ಕರನ್ ಇ (ಕಬಡ್ಡಿ), ಜಯಂತ ಕುಮಾರ್ ಪುಶಿಲಾಲ್ (ಟೇಬಲ್ ಟೆನಿಸ್).
ಇದನ್ನೂ ಓದಿ: ಷಟ್ಲರ್ ಸಾಚಿ ಜೋಡಿಗೆ ಖೇಲ್ ರತ್ನ: ಶಮಿ, ಶೀತಲ್ ದೇವಿ ಸೇರಿ 26 ಸಾಧಕರಿಗೆ ಅರ್ಜುನ ಪ್ರಶಸ್ತಿ ಪ್ರದಾನ