ETV Bharat / bharat

ದಾವೂದ್​ ಇಬ್ರಾಹಿಂ ಜೊತೆ ನಂಟು ಕೇಸ್​.. ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ - ನವಾಬ್ ಮಲಿಕ್​ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಜೊತೆ ಅಕ್ರಮ ಹಣಕಾಸಿನ ವ್ಯವಹಾರ ನಡೆಸಿದ ಆರೋಪದ ಮೇಲೆ ಕಂಬಿ ಎಣಿಸುತ್ತಿರುವ ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​ರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.

nawab-maliks
ನವಾಬ್​ ಮಲಿಕ್
author img

By

Published : Apr 5, 2022, 5:21 PM IST

ಮುಂಬೈ: ದಾವೂದ್ ಇಬ್ರಾಹಿಂ ಜೊತೆ ವ್ಯವಹಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್​ರ ನ್ಯಾಯಾಂಗ ಬಂಧನವನ್ನು ಪಿಎಂಎಲ್‌ಎ ವಿಶೇಷ ಕೋರ್ಟ್​ ಏಪ್ರಿಲ್ 18 ರವರೆಗೆ ವಿಸ್ತರಿಸಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆಗೆ ವ್ಯವಹಾರ ನಡೆಸಿದ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಚಿವ ನವಾಬ್​ ಮಲಿಕ್​ರನ್ನು ಫೆಬ್ರವರಿ 23 ರಂದು ಬಂಧಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದ ಮಲಿಕ್​ರ ಅವಧಿ ಇಂದು ಮುಕ್ತಾಯಗೊಂಡಿತ್ತು. ಇಂದು ಬೆಳಗ್ಗೆ ಮಲಿಕ್​ರನ್ನು ಪಿಎಂಎಲ್‌ಎ ವಿಶೇಷ ಕೋರ್ಟ್ ಹಾಜರುಪಡಿಸಲಾಯಿತು. ಅಲ್ಲದೆ, ಇನ್ನಷ್ಟು ವಿಚಾರಣೆ ನಡೆಸುವ ಅಗತ್ಯವಿರುವ ಕಾರಣ ಬಂಧನದ ಅವಧಿ ವಿಸ್ತರಣೆಗೆ ಪೊಲೀಸ್​ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆ ಏ.18 ರ ವರೆಗೆ ಬಂಧನವನ್ನು ವಿಸ್ತರಿಸಲಾಗಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನವಾಬ್ ಮಲಿಕ್ ಪರ ವಕೀಲ ನೀಲೇಶ್ ಭೋಸ್ಲೆ, ತಮ್ಮ ಬಂಧನವನ್ನು ಕಾನೂನುಬಾಹಿರ ಎಂದು ನವಾಬ್​ ಮಲಿಕ್​ ಪ್ರಶ್ನಿಸಿದ್ದಾರೆ. ಅವರು ತಮ್ಮ ಮನೆಯ ಆಹಾರ ಮತ್ತು ಔಷಧಿಗಳನ್ನು ಪೂರೈಸಲು ವಿನಂತಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಇನ್ನು ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​ ತಮ್ಮ ಬಂಧನದ ವಿರುದ್ಧ ಬಾಂಬೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಜಾಮೀನು ಮಂಜೂರು ಕೋರಿದ್ದರು. ಬಾಂಬೆ ಹೈಕೋರ್ಟ್​ ಕೋರಿಕೆ ನಿರಾಕರಿಸಿ ಅರ್ಜಿಯನ್ನು ವಜಾ ಮಾಡಿದ್ದರು. ಇದರ ವಿರುದ್ಧ ಮಲಿಕ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.

ಓದಿ; ಚಿಕಿತ್ಸೆ ನೀಡುತ್ತಿಲ್ಲವೆಂದು ಸ್ಕೈವಾಕ್​ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ರೋಗಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.