ETV Bharat / bharat

ತಮ್ಮ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಮಾಡಿ; ಮುಂಬೈ ಹೈಕೋರ್ಟ್‌ಗೆ ಸಚಿವ ಮಲಿಕ್ ಅರ್ಜಿ - ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಮಾಡುವಂತೆ ನವಾಬ್‌ ಮಲಿಕ್‌ ಅರ್ಜಿ

ಜಾರಿ ನಿರ್ದೇಶನಾಲಯ(ಇಡಿ) ತಮ್ಮ ವಿರುದ್ಧ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ವಜಾ ಮಾಡಬೇಕೆಂದು ಕೋರಿ ಮುಂಬೈ ಹೈಕೋರ್ಟ್‌ನಲ್ಲಿ ಎನ್‌ಸಿಪಿ ನಾಯಕ, ಮಹಾರಾಷ್ಟ್ರದ ಸಚಿವ ನವಾಬ್‌ ಮಲಿಕ್‌ ಅರ್ಜಿ ಸಲ್ಲಿಸಿದ್ದಾರೆ.

Nawab Malik's petition against ED in Mumbai High Court
ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಮಾಡಿ; ಮುಂಬೈ ಹೈಕೋರ್ಟ್‌ಗೆ ಸಚಿವ ನವಾಬ್‌ ಮಲಿಕ್ ಅರ್ಜಿ
author img

By

Published : Mar 1, 2022, 1:08 PM IST

ಮುಂಬೈ: ಮಹಾರಾಷ್ಟ್ರದ ಕ್ಯಾಬಿನೆಟ್‌ ಸಚಿವ, ಎನ್‌ಸಿಪಿ ನಾಯಕ ನವಾಬ್ ಮಲಿಕ್ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಂಬೈ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅರ್ಜಿಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ಇಡಿ ತಮ್ಮನ್ನು ಬಂಧಿಸಿರುವುದು ಅಕ್ರಮವಾಗಿದೆ. ಮುಂಬೈ ಸೆಷನ್ಸ್ ಕೋರ್ಟ್‌ನ ಪಿಎಂಎಲ್‌ಎ ನ್ಯಾಯಾಲಯವು ನ್ಯಾಯವ್ಯಾಪ್ತಿಯಿಲ್ಲದೇ ಕಸ್ಟಡಿಗೆ ನೀಡುವ ಆದೇಶ ನೀಡಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಕೋರ್ಟ್‌ ಈ ವಾರವೇ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯೆತ ಇದೆ. ದಾವೂದ್ ಇಬ್ರಾಹಿಂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಫೆ.23 ರಂದು ಬಂಧಿಸಿದ್ದರು.

ಅಂದು ಬೆಳಗ್ಗೆಯಿಂದಲೇ ಮಲಿಕ್ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ಯಾವುದಕ್ಕೂ ಹೆದರುವುದಿಲ್ಲ. ನಾವು ಹೋರಾಡುತ್ತೇವೆ ಮತ್ತು ಇದರಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ಯಾವುದೇ ರಂಗದ ರಚನೆ ಇಲ್ಲ : ಸಂಜಯ್ ರಾವತ್​

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.