ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶ ಮತ್ತು ಫೂಲ್‌ಬಾಗಡಿ ಎಂಬಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಇಂದು ಬೆಳಗ್ಗೆ ಜಿಲ್ಲಾ ಮೀಸಲು ಪಡೆ(ಡಿಆರ್ಜಿ) ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ. ಬೆಳಗ್ಗೆ 7.30ರ ಸುಮಾರಿಗೆ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗಸ್ತು ಪಡೆ ತೆರಳುತ್ತಿದ್ದಾಗ ನಕ್ಸಲರು ಗುಂಡಿನ ದಾಳಿ ನಡೆಸಿದರು. ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ.
ಪೊಲೀಸರ ದಾಳಿಯಿಂದ ಕಂಗೆಟ್ಟ ನಕ್ಸಲರು ಪರಾರಿಯಾಗಿದ್ದಾರೆ. ಬಳಿಕ ಘಟನಾ ಸ್ಥಳದಿಂದ ಒಬ್ಬ ನಕ್ಸಲನ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಇನ್ನೊಂದೆಡೆ ಫೂಲ್‌ಬಾಗಡಿ ಪ್ರದೇಶದಲ್ಲಿ ನಡೆದ ದಾಲಿಯಲ್ಲಿ ಮತ್ತೊಬ್ಬ ನಕ್ಸಲೀಯನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಓದಿ: ಮೂರು ಕೊಲೆ ಅಪರಾಧಿಗಳು ಯಾವುದೇ ಸಂಘಟನೆ, ಸಿದ್ದಾಂತದವರಾಗಿದ್ದರೂ ಬಂಧಿಸುತ್ತೇವೆ:ಡಿಜಿಪಿ ಸ್ಪಷ್ಟನೆ