ಮುಂಬೈ(ಮಹಾರಾಷ್ಟ್ರ) : ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಎರಡನೇ ವಿದೇಶಿ ಪ್ರಜೆಯನ್ನು ಬಂಧಿಸಿದೆ.
ಬಂಧಿತನಿಂದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ವಶಕ್ಕೆ ಪಡೆಯಲಾಗುವುದು. ಈ ಪ್ರಕರಣದ ತನಿಖೆಯಲ್ಲಿ ಈತ ಪ್ರಮುಖ ವ್ಯಕ್ತಿ ಎಂದು ಎನ್ಸಿಬಿ ಹೇಳಿದೆ.
ಇದನ್ನೂ ಓದಿ: ಬಾಲಿವುಡ್ ನಿರ್ಮಾಪಕ ಇಮ್ತಿಯಾಜ್ ಖತ್ರಿ ಮನೆ, ಕಚೇರಿ ಮೇಲೆ ಮುಂದುವರಿದ ಎನ್ಸಿಬಿ ದಾಳಿ
ಕ್ರೂಸ್ನಲ್ಲಿ ಡ್ರಗ್ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧ ಪಟ್ಟಂತೆ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನವಾಗಿತ್ತು. ನ್ಯಾಯಾಲಯ ಆರ್ಯನ್‌ಗೆ ಜಾಮೀನು ನಿರಾಕರಿಸಿದೆ. ಈ ಸಂಬಂಧ ಎನ್ಸಿಬಿ ಹಲವಾರು ಪ್ರತಿಷ್ಠಿತ ವ್ಯಕ್ತಿಗಳ ಮನೆ ಮೇಲೆಯೂ ದಾಳಿ ನಡೆಸಿ, ತನಿಖೆ ನಡೆಸುತ್ತಿದೆ.