ETV Bharat / bharat

ನಿವಾರ್ ಚಂಡಮಾರುತ ಭೀತಿ: ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಎನ್‌ಸಿಎಂಸಿ ಪರಿಶೀಲನೆ

ನಿವಾರ್​​​ ಚಂಡಮಾರುತವು ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತ ಹವಾಮಾನ ಇಲಾಖೆಯ ಮಹಾನಿರ್ದೇಶಕರು ಹೇಳಿದ್ದಾರೆ.

cyclone Nivar
ನಿವಾರ್ ಚಂಡಮಾರುತ
author img

By

Published : Nov 23, 2020, 7:28 PM IST

ನವದೆಹಲಿ: ನವೆಂಬರ್​​​ 24 ರಿಂದ 26ರ ನಡುವೆ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ನಿರೀಕ್ಷೆಯಿರುವ 'ನಿವಾರ್' ಚಂಡಮಾರುತದ ಸ್ಥಿತಿಯನ್ನು ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್‌ಸಿಎಂಸಿ) ಪರಿಶೀಲಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯಲು ಅವಕಾಶ ನೀಡಬಾರದು ಎಂದು ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಿದೆ.

ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ಎನ್‌ಸಿಎಂಸಿ, ಪ್ರಾಣಹಾನಿ ಮತ್ತು ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಸಹಜ ಸ್ಥಿತಿಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಉದ್ದೇಶದಿಂದ ಕೆಲಸ ಮಾಡಲು ಸಂಬಂಧಪಟ್ಟ ಪ್ರತಿಯೊಬ್ಬರಿಗೂ ನಿರ್ದೇಶನ ನೀಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಭೆಯಲ್ಲಿ ನಿವಾರ್ ಚಂಡಮಾರುತದ ಸ್ಥಿತಿಯನ್ನು ಎನ್‌ಸಿಎಂಸಿ ಪರಿಶೀಲಿಸಿದೆ. ಮುಖ್ಯ ಕಾರ್ಯದರ್ಶಿಗಳು ಎನ್‌ಸಿಎಂಸಿಗೆ ಅವರ ಸನ್ನದ್ಧತೆಯ ಬಗ್ಗೆ ಮಾಹಿತಿ ನೀಡಿದರು.

ಯಾವುದೇ ಸಂಭವನೀಯತೆಯನ್ನು ಪೂರೈಸಲು ಅಧಿಕಾರಿಗಳು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಸವಾಲನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ತಂಡಗಳ ಸಮನ್ವಯದ ಬಗ್ಗೆ ಅವರು ಎನ್‌ಸಿಎಂಸಿಗೆ ಮಾಹಿತಿ ನೀಡಿದರು.

ಭಾರತ ಹವಾಮಾನ ಇಲಾಖೆಯ ಮಹಾನಿರ್ದೇಶಕರು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ್ದು, ಚಂಡಮಾರುತದ ಸ್ಥಿತಿಯನ್ನು ಸಂಬಂಧಪಟ್ಟ ರಾಜ್ಯಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.