ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿನ್ನೆ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಅವರನ್ನು ತಪಾಸಣೆಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಈ ವೇಳೆ ಅವರ ಪಿತ್ತಕೋಶದಲ್ಲಿ ಸಮಸ್ಯೆ ಇರುವುದು ತಿಳಿದು ಬಂದಿದೆ ಎಂದು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ.
ಇದನ್ನೂ ಓದಿ: ಸರ್ಪಂಚ್ ಸೇರಿ ಒಂದೇ ಗ್ರಾಮದ 170 ಮಂದಿಗೆ ಕೊರೊನಾ: ಊರಿಗೆ ಊರೇ ಈಗ ಕಂಟೇನ್ಮೆಂಟ್ ಝೋನ್
ಶರದ್ ಪವಾರ್ ಅವರನ್ನು ಮಾರ್ಚ್ 31 ರಂದು ಆಸ್ಪತ್ರೆಗೆ ದಾಖಲಿಸಲಾಗುವುದು. ಈ ವೇಳೆ ಅವರಿಗೆ ಎಂಡೋಸ್ಕೋಪಿ ಮತ್ತು ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಅನಾರೋಗ್ಯದ ಕಾರಣ ಮುಂದಿನ ಅವರ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳು ರದ್ದಾಗಿವೆ ಎಂದು ಎನ್‌ಸಿಪಿ ನಾಯಕ ನವಾಬ್ ಮಲಿಕ್ ತಿಳಿಸಿದ್ದಾರೆ.