ETV Bharat / bharat

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ - ಎನ್‌ಸಿಪಿ ಅಧ್ಯಕ್ಷ ಶರದ್​ ಪವಾರ್ ಆರೋಗ್ಯದಲ್ಲಿ ಚೇತರಿಕೆ

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

Nationalist Congress Party President Sharad Pawar
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್
author img

By

Published : Nov 7, 2022, 4:27 PM IST

ಮುಂಬೈ (ಮಹಾರಾಷ್ಟ್ರ): ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಎನ್‌ಸಿಪಿ ಅಧ್ಯಕ್ಷ ಶರದ್​ ಪವಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್​ ಮಾಡಲಾಗಿದೆ.

ಅಕ್ಟೋಬರ್ 31ರಂದು ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಬ್ರೀಚ್​ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎಂಟು ದಿನಗಳಿಂದಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್​, ಇದೇ ವೇಳೆ ನವೆಂಬರ್ 4 ಮತ್ತು 5 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷದ ಶಿಬಿರಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ನವೆಂಬರ್ 5 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪೆತ್ರೆಗೆ ತೆರೆಳಿ ಪವಾರ್ ಅವರ ಆರೋಗ್ಯ ವಿಚಾರಿಸಿದ್ದು ಗಮನಾರ್ಹ.

ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಸಿದ್ದ ಸಿಎಂ ಏಕನಾಥ ಶಿಂದೆ, ಶರದ್ ಪವಾರ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದರು.

ಸದ್ಯ ಪವಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನಲೆ ಶರದ್​ ಪವಾರ್​ ಅವರನ್ನು ಬಿಡುಗಡೆ ಮಾಡಬಹುದು ಎಂದು ವೈದ್ಯರು ಹೇಳಿದ್ದರು. ಅವರ ಸಲಹೇ ಮೇರೆಗೆ ಅವರನ್ನು ಇಂದು ಡಿಸ್ಚಾರ್ಜ್​ ಮಾಡಲಾಗಿದ್ದು, ಸುಪ್ರಿಯಾ ಸುಳೆ ತಮ್ಮ ತಂದೆಯನ್ನು ಮುಂಬೈನಲ್ಲಿರುವ ತಮ್ಮ ಸಿಲ್ವರ್ ಓಕ್ ನಿವಾಸಕ್ಕೆ ಕರೆದುಕೊಂಡು ಹೋದರು.

ಇದನ್ನು ಓದಿ;ನಟಿ ಕೇತ್ಕಿ ಬೆನ್ನಲ್ಲೇ ಬಿಜೆಪಿ ವಕ್ತಾರರಿಂದ ಶರದ್ ಪವಾರ್ ಬಗ್ಗೆ ಪೋಸ್ಟ್ : ಎನ್‌ಸಿಪಿ ಕಾರ್ಯಕರ್ತರಿಂದ ಹಲ್ಲೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.