ETV Bharat / bharat

Mysuru Gangrape case: ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿಜಿಪಿಗೆ ಪತ್ರ ಬರೆದ ರಾ.ಮಹಿಳಾ ಆಯೋಗ

author img

By

Published : Aug 26, 2021, 1:10 PM IST

Updated : Aug 26, 2021, 1:17 PM IST

ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ(NCW), ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಿಜಿಪಿಗೆ ಪತ್ರ ಬರೆದಿದೆ.

ncw takes cognizance of Mysore gangrape case
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ರಾಜ್ಯ ಡಿಜಿಪಿಗೆ ರಾ.ಮಹಿಳಾ ಆಯೋಗ ಪತ್ರ

ನವದೆಹಲಿ: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.

ncw takes cognizance of Mysore gangrape case
ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿಜಿಪಿಗೆ ಪತ್ರ ಬರೆದ ರಾ.ಮಹಿಳಾ ಆಯೋಗ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ, ನಮಗೆ ಲಭ್ಯವಾಗಿರುವ ವರದಿಯಂತೆ ಸದ್ಯಕ್ಕೆ ಎಫ್‌ಐಆರ್‌ ದಾಖಲಾಗಿದೆ ಅಷ್ಟೇ. ಆದರೆ ಈವರೆಗೆ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಕೂಡಲೇ ಬಂಧಿಸಿ, ವಿವಿಧ ಸೆಕ್ಷನ್‌ಗಳಡಿ ಕ್ರಮ ಕೈಗೊಳ್ಳಬೇಕು ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ

ಇದೇ ವಿಚಾರವಾಗಿ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರ ಜೊತೆಗೂ ರೇಖಾ ಶರ್ಮಾ ಮಾತುಕತೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕ್ರಿಮಿನಲ್‌ ಪೀನಲ್‌ ಕೋಡ್‌-1972ರ ಸೆಕ್ಷನ್‌ 357ಎ ಅಡಿಯಲ್ಲಿ ಸಂತ್ರಸ್ತ ಪರಿಹಾರ ಯೋಜನೆಯಡಿಯಲ್ಲಿ ಸಂತ್ರಸ್ತೆಗೆ ಅಗತ್ಯ ವೈದ್ಯಕೀಯ ನೆರವು ಹಾಗೂ ಕೌನ್ಸೆಲಿಂಗ್‌ಗೆ ಸಹಕಾರ ನೀಡಬೇಕು. ಇದ್ರ ಜೊತೆಗೆ, ಎಲ್ಲಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದು ತಿಳಿಸಿದೆ.

Last Updated : Aug 26, 2021, 1:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.