ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು ಪ್ರತಿಪಕ್ಷಗಳ ಬೆಂಬಲ ಕೋರಿದ್ದಾರೆ. ಪ್ರಮುಖ ವಿಪಕ್ಷ ನಾಯಕರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್, ಟಿಎಂಸಿ ನಾಯಕಿ ಹಾಗು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ದೂರವಾಣಿ ಕರೆ ಮಾಡಿ ಅವರು ಮಾತನಾಡಿದರು.
ಮುರ್ಮು ಅವರು ಜುಲೈ 18ರಂದು ನಡೆಯವ ರಾಷ್ಟ್ರಪತಿ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರತಿಪಕ್ಷಗಳ ಮೂವರು ಪ್ರಮುಖ ನಾಯಕರಿಗೆ ದೂರವಾಣಿ ಕರೆಮಾಡಿ, ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಇದಕ್ಕೆ ಪ್ರತಿಯಾಗಿ ಮೂವರು ನಾಯಕರು ಕೂಡಾ ಮುರ್ಮು ಅವರಿಗೆ ಶುಭ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು