ETV Bharat / bharat

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಪ್ರೋತ್ಸಾಹಿಸುವ ಅಗತ್ಯವಿದೆ: ಪ್ರಧಾನಿ ಮೋದಿ - ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಬಳಕೆ

ದೇಶದಲ್ಲಿರುವ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಹೆಚ್ಚಾಗಿ ಬಳಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

PM Modi on local languages in court
PM Modi on local languages
author img

By

Published : Apr 30, 2022, 8:01 PM IST

ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದಿರುವ ಪ್ರಧಾನಿ ಮೋದಿ, ಇದರಿಂದ ಸಾಮಾನ್ಯ ನಾಗರಿಕರಲ್ಲೂ ನ್ಯಾಯ ವ್ಯವಸ್ಥೆ ಬಗ್ಗೆ ಹೆಚ್ಚು ವಿಶ್ವಾಸ ಮೂಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನುದ್ದೇಶಿಸಿ ಅವರು ಮಾತನಾಡಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಪ್ರಧಾನಿ, ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಬಳಸುವುದರಿಂದ ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸ ಹೆಚ್ಚಾಗುವುದರ ಜೊತೆಗೆ ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುತ್ತಾರೆ ಎಂದರು. ನ್ಯಾಯ ವಿತರಣೆ ಸುಲಭಗೊಳಿಸಲು ಹಳೆಯ ಕಾನೂನು ರದ್ದುಗೊಳಿಸುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ ನಮೋ, 2015ರಲ್ಲಿ ನಾವು ಅಪ್ರಸ್ತುತವಾದ 1,800 ಕಾನೂನುಗಳನ್ನು ಗುರುತಿಸಿದ್ದೇವೆ. ಇದರಲ್ಲಿ ಕೇಂದ್ರದ ಅಡಿಯಲ್ಲಿ ಬರುವ 1,450 ಕಾನೂನುಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಭಾರತ ಇದೀಗ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದ್ದು, ಇಂತಹ ಸಂದರ್ಭದಲ್ಲಿ ಜನರಿಗೆ ಸುಲಭವಾಗಿ, ತ್ವರಿತವಾಗಿ ನ್ಯಾಯ ಸಿಗುವುದರ ಕಡೆ ನಾವು ಗಮನ ಹರಿಸಬೇಕು. ನಮ್ಮ ದೇಶದಲ್ಲಿ ನ್ಯಾಯಾಂಗ ಸಂವಿಧಾನದ ರಕ್ಷಕನಾಗಿದ್ದು, ಶಾಸಕಾಂಗ ನಾಗರಿಕರ ಆಕಾಂಕ್ಷೆಗಳನ್ನ ಪ್ರತಿನಿಧಿಸುತ್ತದೆ. ನ್ಯಾಯಾಂಗ ಮತ್ತು ಶಾಸಕಾಂಗದ ಸಂಗಮದಿಂದ ಪರಿಣಾಮಕಾರಿ ಮಾರ್ಗಸೂಚಿ ಸಿದ್ಧಪಡಿಸಬೇಕು. ನಾಗರಿಕರನ್ನ ಮತ್ತಷ್ಟು ಸಬಲೀಕರಣಗೊಳಿಸಲು ಡಿಜಿಟಲ್​​ ನ್ಯಾಯಾಂಗ ವ್ಯವಸ್ಥೆಯ ಅವಶ್ಯಕತೆ ಇದೆ ಎಂದರು.

ಇದನ್ನೂ ಓದಿ: 20 ರೂಪಾಯಿಗೆ 50 ಕಿ.ಮೀ.​ ಪ್ರಯಾಣ​.. ವಿಶೇಷ ಬೈಕ್​​ ತಯಾರಿಸಿದ ಯುವಕ!

ಬಳಕೆಯಾಗದ ಕಾನೂನು ರದ್ದುಗೊಳಿಸುವಲ್ಲಿ ನಿಧಾನಗತಿ ಅನುಸರಣೆ ಮಾಡುತ್ತಿರುವ ರಾಜ್ಯಗಳಿಗೆ ಕಿವಿಮಾತು ಹೇಳಿದ ಮೋದಿ, ರಾಜ್ಯಗಳಲ್ಲಿ ಇಲ್ಲಿಯವರೆಗೆ ಕೇವಲ 75 ಕಾನೂನುಗಳು ಮಾತ್ರ ರದ್ದುಗೊಂಡಿವೆ ಎಂದರು. ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್​ ರಿಜಿಜು, ಭಾರತದ ಮುಖ್ಯ ನ್ಯಾಯಮೂರ್ತಿ ಎನ್​ ವಿ ರಮಣ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಛತ್ತೀಸ್​ಗಢ ಸಿಎಂ ಭೂಪೇಶ್ ಭಾಘೇಲ್​, ಅಸ್ಸೋಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಪಂಜಾಬ್​ ಸಿಎಂ ಭಗವಂತ್ ಮಾನ್​​ ಸೇರಿದಂತೆ ಅನೇಕ ರಾಜ್ಯಗಳ ಸಿಎಂ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.