ETV Bharat / bharat

ದೆಹಲಿ-ಎನ್‌ಸಿಆರ್​ನಲ್ಲಿ ಕೋವಿಡ್ ಉಲ್ಬಣ : ಏಕೀಕೃತ ಕಾರ್ಯತಂತ್ರಕ್ಕೆ ಗೃಹ ಇಲಾಖೆ ಕರೆ

ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಮತ್ತು ಸಾರ್ವಜನಿಕ ಸಭೆಗಳಲ್ಲಿ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿ ರಾಜ್ಯ ಮತ್ತು ಸ್ಥಳೀಯ ಆಡಳಿತವು ಕೋವಿಡ್​ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು..

Delhi-NCR
ದೆಹಲಿ-ಎನ್‌ಸಿಆರ್​ನಲ್ಲಿ ಕೋವಿಡ್ ಉಲ್ಬಣ
author img

By

Published : Jan 7, 2022, 12:41 PM IST

ನವದೆಹಲಿ : ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳು ಸೇರಿದಂತೆ ಕೋವಿಡ್​ ಉಲ್ಬಣಗೊಂಡಿದೆ. ಏಕೀಕೃತ ಕಾರ್ಯತಂತ್ರದ ಅಗತ್ಯವನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಎತ್ತಿ ಹಿಡಿದಿದೆ.

ಗುರುವಾರ ಸಂಜೆ ನಡೆದ ಸಭೆಯಲ್ಲಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿದಿನ ದಾಖಲೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಮೂರನೇ ಅಲೆ ಎದುರಿಸಲು ಏಕೀಕೃತ ಕಾರ್ಯತಂತ್ರಕ್ಕೆ ಕರೆ ನೀಡಿದ್ದಾರೆ.

ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ ವಿ ಕೆ ಪಾಲ್, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಗಳು ಮತ್ತು ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ದೆಹಲಿ-ಎನ್‌ಸಿಆರ್ ಪ್ರದೇಶದ ವ್ಯಾಪ್ತಿಯಲ್ಲಿ ದೆಹಲಿ ಸೇರಿದಂತೆ ಉತ್ತರಪ್ರದೇಶ ಮತ್ತು ಹರಿಯಾಣ ರಾಜ್ಯಗಳ ಒಂಬತ್ತು ಗಡಿ ಜಿಲ್ಲೆಗಳು ಬರುತ್ತವೆ.

ಇದನ್ನೂ ಓದಿ: 1.17 ಲಕ್ಷಕ್ಕೆ ಏರಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ: ಮೂರನೇ ಅಲೆಗೆ ದೇಶವೇ ತತ್ತರ!

ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಮತ್ತು ಸಾರ್ವಜನಿಕ ಸಭೆಗಳಲ್ಲಿ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿ ರಾಜ್ಯ ಮತ್ತು ಸ್ಥಳೀಯ ಆಡಳಿತವು ಕೋವಿಡ್​ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.

ಆರೋಗ್ಯ ಮೂಲಸೌಕರ್ಯವನ್ನು ತಕ್ಷಣವೇ ಬಲಪಡಿಸಬೇಕು. ಈ ಪ್ರದೇಶದಲ್ಲಿ ಕೊರೊನಾ ಪರೀಕ್ಷೆ ಹೆಚ್ಚಿಸಬೇಕು ಎಂದು ಭಲ್ಲಾ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 15,000ಕ್ಕೂ ಹೆಚ್ಚು ಕೊರೊನಾ ಕೇಸ್​​ ಪತ್ತೆಯಾಗಿವೆ. ಆರು ಮಂದಿ ಮೃತಪಟ್ಟಿದ್ದಾರೆ. 2021ರ ಮೇ 8ರ ಬಳಿಕ ಇಷ್ಟೊಂದು ಸೋಂಕಿತರು ಕಂಡು ಬಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.